HomeUncategorizedಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ 'ಕಮಲ-ದಳ' ಮುಖಂಡರು

ಲೋಕಸಭಾ ಚುನಾವಣೆ 2024: ತುಮಕೂರು ಅಭ್ಯರ್ಥಿ ಸೋಮಣ್ಣ ಸಮ್ಮುಖದಲ್ಲೇ ಕಿತ್ತಾಡಿಕೊಂಡ ‘ಕಮಲ-ದಳ’ ಮುಖಂಡರು

- Advertisement -
- Advertisement -

ಲೋಕಸಭಾ ಚುನಾವಣೆ ಸಬಂಧ ಸೋಮವಾರ ತುಮಕೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕಾರ್ಯಕರ್ತರು ಪರಸ್ಪರ ಘರ್ಷಣೆಗೆ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವಾಗ ಮಿತ್ರಪಕ್ಷಗಳ ನಡುವೆ ಬಿರುಕು ಮೂಡಿದ್ದು, ತಮ್ಮ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡಲು ಈ ಸಭೆ ಕರೆಯಲಾಗಿತ್ತು.

ತುಮಕೂರಿನಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಬಿಜೆಪಿ ನಾಯಕ ಕೊಂಡಜ್ಜಿ ವಿಶ್ವನಾಥ್ ಕಾರಣ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದಾಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ವಿಶ್ವನಾಥ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ, ನಂತರ ಬಿಜೆಪಿಗೆ ಪ್ರವೇಶಿಸಿದರು. ವಿಶ್ವನಾಥ್ ಮಾತನಾಡಲು ಮುಂದಾದಾಗ ಸೋಮಣ್ಣ ಅವರನ್ನು ತಡೆದರು. ವೇದಿಕೆಯಲ್ಲಿದ್ದ ಬಹುತೇಕ ಜೆಡಿಎಸ್ ಕಾರ್ಯಕರ್ತರು ಕೃಷ್ಣಪ್ಪ ಪರ ನಿಂತರು.

‘2019ರ ಚುನಾವಣೆಯಲ್ಲಿ ಬಿಜೆಪಿಯ ಕೊಂಡಜ್ಜಿ ವಿಶ್ವನಾಥ್‌ ಅವರು ಅಂದಿನ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಗೆ ಬೆಂಬಲ ನೀಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ ಇದ್ದುಕೊಂಡು ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆಯೇ ಅಥವಾ ಬೇರೆ ಏನಾದರೂ ಮಾಡುತ್ತಾರೆಯೇ’ ಎಂದು ಕೃಷ್ಣಪ್ಪ ಅವರು ಪ್ರಶ್ನಿಸಿದ್ದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತು.

ವಾಕ್ಸಮರ ತಾರಕಕ್ಕೆ ಏರುತ್ತಿದ್ದಂತೆಯೇ ಕೃಷ್ಣಪ್ಪ ಹೇಳಿಕೆಗೆ ಸಮಜಾಯಿಷಿ ಕೊಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್‌ ಅವರನ್ನು ತಡೆದ ವಿ. ಸೋಮಣ್ಣ, ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ‘ಈಗ ಏನೂ ಮಾತನಾಡುವುದು ಬೇಡ’ ಎಂದು ವಿಶ್ವನಾಥ್ ಅವರನ್ನು ವಾಪಸ್‌ ಕಳುಹಿಸಿದರು. ಇದರಿಂದಾಗಿ ವೇದಿಕೆ ಮೇಲೆಯೇ ಮುಖಂಡರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ವೇದಿಕೆಯ ಮುಂಭಾಗದಲ್ಲಿದ್ದ ಬಿಜೆಪಿಯ ಕಡೇಹಳ್ಳಿ ಸಿದ್ದೇಗೌಡ ಮಾತನಾಡಿ, “ಕೃಷ್ಣಪ್ಪ ಯಾವಾಗಲೂ ಇಂತಹ ದುರಹಂಕಾರದ ಮಾತುಗಳನ್ನು ಆಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ಕೇಳಿಸಿಕೊಂಡು ವೇದಿಕೆಯಲ್ಲಿದ್ದ ಜೆಡಿಎಸ್‌ನ ವೆಂಕಟಾಪುರದ ಯೋಗೇಶ್‌ ಅವರು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು. ಎರಡೂ ಪಕ್ಷದ ಮುಖಂಡರನ್ನು ಸಮಾಧಾನ ಪಡಿಸಲು ಸೋಮಣ್ಣ ಯತ್ನಿಸಿದರು.

ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿಯ ರಾಜ್ಯ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ, ತಳಮಟ್ಟದ ಕಾರ್ಯಕರ್ತರ ನಡುವೆ ಸೈದ್ದಾಂತಿಕ ಹೊಂದಾಣಿಕೆ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಅಸಮಾಧಾನ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕು. ಸದ್ಯಕ್ಕೆ ಸಮಸ್ಯೆ ಬಗೆಹರಿದಿದ್ದರೂ, ಚುನಾವಣೆಗೆ ಮುನ್ನ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಒಗ್ಗಟ್ಟು ಮೂಡದೇ ಇರುವುದು ಸೋಮಣ್ಣ ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್  ಸ್ಪರ್ಧೆ ಮಾಡಲಿದೆ. ಆದರೆ, ಜೆಡಿಎಸ್ ಯಾವ ಕ್ಷೇತ್ರಗಳಿಗೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

ಸೀಟು ಹಂಚಿಕೆ ಸೂತ್ರದ ಪ್ರಕಾರ ಜೆಡಿಎಸ್ ಮೂರು ಕ್ಷೇತ್ರಗಳಾದ  ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಹಾಸನ ದೇವೇಗೌಡರ ತವರು ಕ್ಷೇತ್ರವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿಯುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 24 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ನಾಟಕ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...