Homeಮುಖಪುಟಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದೇನು?

ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದೇನು?

- Advertisement -
- Advertisement -

ಮುಂದಿನ ಲೋಕಸಭಾ ಚುನಾವಣೆಯನ್ನು ಅವಧಿಗೂ ಮುನ್ನವೇ ನಡೆಸಲಾಗುತ್ತಿದೆ. ಆರು ತಿಂಗಳಲ್ಲಿಯೇ ಲೋಕಸಭಾ ಚುನಾವಣೆ ಎದುರಾಗಬಹುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರ ಬಹುಮತ ಹೊಂದಿದ್ದು, ಲೋಕಸಭೆ ಚುನಾವಣೆಯನ್ನು ನಿಸ್ಸಂಶಯವಾಗಿ ಅವಧಿಗೂ ಮುನ್ನವೇ ನಡೆಸಬಹುದು. ಪ್ರತಿ ಪಕ್ಷಗಳು ಒಗ್ಗಟ್ಟಾಗುವುದನ್ನು ತಡೆಯಲು ಮೋದಿ ಈ ತಂತ್ರ ಅನುಸರಿಸುತ್ತಾರೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ₹6,680.67 ಕೋಟಿ ಮೊತ್ತದ 5,061 ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, “ಮುಂಬರುವ ದಿನಗಳಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ತಮ್ಮ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಬಿಜೆಪಿ ಭಾವಿಸಬಹುದು, ಹಾಗಾಗಿ ಅದು ಲೋಕಸಭಾ ಚುನಾವಣೆಯನ್ನು ಕೆಲವೇ ದಿನಗಳಲ್ಲಿ ನಡೆಸಬಹುದು” ಎಂದಿದ್ದಾರೆ.

ಜನವರಿ 2024 ರೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಇಲಾಖೆಯ ಪರಿಶೀಲನಾ ಸಭೆಯಲ್ಲಿ ನನಗೆ ತಿಳಿಸಲಾಯಿತು. ಎಲ್ಲಾ ಯೋಜನೆಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ. ಲೋಕಸಭೆ ಚುನಾವಣೆ ಯಾವಾಗ ನಡೆಯಲಿದೆ ಎಂಬುದು ಯಾರಿಗೂ ತಿಳಿದಿಲ್ಲ. ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಸಲಾಗುವುದು ಎಂದು ಹೇಳಲಾಗುವುದಿಲ್ಲ. ಈ ವರ್ಷವೇ ಇವುಗಳನ್ನು ಅವಧಿಗೆ ಮುನ್ನ ನಡೆಸುವ ಸಾಧ್ಯತೆಯಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ನಿತೀಶ್ ಕುಮಾರ್ ಕಳೆದ ವರ್ಷ ಮೈತ್ರಿ ಮುಗಿದುಕೊಂಡು ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿ ಸೇರಿ ಸಿಎಂ ಆಗಿದ್ದಾರೆ. ಅಲ್ಲದೇ 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪ್ರತಿ ಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದಾರೆ. ಆ ಭಾಗವಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿ ಪಕ್ಷಗಳ ಮುಖಂಡರ ಮಹತ್ವದ ಸಭೆ ಕರೆದಿದ್ದಾರೆ.

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳು ಒಗ್ಗೂಡಬೇಕು. ಜೂನ್ 23 ರ ಸಭೆಯ ನಂತರ ನಾವು ಸಿದ್ಧತೆಗಳನ್ನು ಪ್ರಾರಂಭಿಸಬೇಕು” ಎಂದು ಅವರು ಹೇಳಿದ್ದಾರೆ.

ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ ನಡೆಯಬಹುದು. ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಅವರು ಏನು ಬೇಕಾದರು ಮಾಡಬಹುದು ಎಂದಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಲು ಒಪ್ಪಿದ್ದ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಸಿ.ಟಿ ರವಿಗೆ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟ ಮಾಡುತ್ತಿದ್ದ ಯುವಕನಿಗೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...