Homeಮುಖಪುಟಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ಲೋಕಸಭೆ ಚುನಾವಣೆ: ಆರು ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಮೊದಲ ಹಂತದ 10 ರಾಜ್ಯಗಳ ಪೈಕಿ 6 ರಾಜ್ಯಗಳಿಗೆ ಕಾಂಗ್ರೆಸ್‌ ಬಹುತೇಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ನಿನ್ನೆ(ಮಾ.7) ಸಂಜೆ ಪ್ರಾರಂಭಗೊಂಡ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲ ಸಭೆ ತಡರಾತ್ರಿ ಮುಕ್ತಾಯಗೊಂಡಿತ್ತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವೇಣುಗೋಪಾಲ್, ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮಗೊಂಡಿರುವುದಾಗಿ ಹೇಳಿದ್ದಾರೆ.

“ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಮತ್ತು ಲಕ್ಷದ್ವೀಪದ ಲೋಕಸಭಾ ಕ್ಷೇತ್ರಗಳಿಗೆ ನಾವು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಇನ್ನೂ ಪ್ರಕ್ರಿಯೆ ಮುಂದುವರೆಯುತ್ತಿದೆ. ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು” ಎಂದು ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ರಾಹುಲ್ ಗಾಂಧಿ ಅವರು ಕೇರಳದ ವಯನಾಡ್‌ನಿಂದ, ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಛತ್ತೀಸ್‌ಗಢದ ರಾಜನಂದಗಾಂವ್‌ನಿಂದ ಮತ್ತು ಜ್ಯೋತ್ಸ್ನಾ ಮಹಂತ್ ಕೊರ್ಬಾದಿಂದ ಮತ್ತೆ ಸ್ಪರ್ಧಿಸಲಿದ್ದಾರೆ. ಅಲ್ಲದೆ, ಛತ್ತೀಸ್‌ಗಢದ ಎಲ್ಲ ಪ್ರಮುಖ ನಾಯಕರು ಚುನಾವಣಾ ಕಣದಲ್ಲಿದ್ದಾರೆ.

ಕೇರಳದ 20 ಸ್ಥಾನಗಳ ಪೈಕಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಕೇಂದ್ರದ ಮಾಜಿ ಸಚಿವ ಹಾಗೂ ತಿರುವನಂತಪುರದ ಹಾಲಿ ಸಂಸದ ಶಶಿ ತರೂರ್ ಅಭ್ಯರ್ಥಿಗಳ ಪೈಕಿ ಸೇರಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವರನ್ನು ಕಣಕ್ಕಿಳಿಸುವ ಸಾಧ್ಯತೆಯಿಲ್ಲ. ಬಹುತೇಕ ಸಚಿವರು ರಾಷ್ಟ್ರೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ತಿಳಿದು ಬಂದಿದೆ.

ರಾಜ್ಯದ ಅಭ್ಯರ್ಥಿಗಳ ಪೈಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ಕೂಡ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಚುನಾವಣಾ ಸಮಿತಿಯು ಸೋಮವಾರ ಮತ್ತೆ ಸಭೆ ಸೇರಲಿದೆ. ಅಂದು ದೆಹಲಿ, ಛತ್ತೀಸ್‌ಗಢ, ತೆಲಂಗಾಣ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ತ್ರಿಪುರ, ಸಿಕ್ಕಿಂ ಮತ್ತು ಲಕ್ಷದ್ವೀಪದ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಈಶಾನ್ಯ ರಾಜ್ಯಗಳಿಗೆ ಮುಂದಿನ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬರೋಬ್ಬರಿ 90 ಸ್ಥಾನಗಳನ್ನು ಹೊಂದಿರುವ ಎರಡು ನಿರ್ಣಾಯಕ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಬಂಗಾಳದಲ್ಲಿ ಕಾಂಗ್ರೆಸ್ ಇನ್ನೂ ಸೀಟು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಿಲ್ಲ. ಈ ನಡುವೆ ಇತರ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಕಾರ್ಯ ಪ್ರವೃತ್ತವಾಗಿದೆ.

ಮಹಾರಾಷ್ಟ್ರದ 48 ಸ್ಥಾನಗಳ ಸೀಟು ಹಂಚಿಕೆಯ ಕುರಿತು ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷಗಳ ನಡುವೆ ಮಾತುಕತೆ ಇನ್ನೂ ಪ್ರಗತಿಯಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರ ಸ್ಪರ್ಧೆಗೆ ಟಿಎಂಸಿ ಮುಂದಾಗಿದೆ. ಇಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಅಸಮಾಧಾನ ಶಮನಗೊಳಿಸಬೇಕಿದೆ.

ಇದನ್ನೂ ಓದಿ : ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿಗೆ ಕಾಂಗ್ರೆಸ್‌ನ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...