Homeಮುಖಪುಟಲೋಕಸಭೆ ಚುನಾವಣೆ ಸಿದ್ಧತೆ: ಜನವರಿ 7ರಿಂದ ರಾಜ್ಯಗಳಿಗೆ ಚುನಾವಣಾ ಆಯೋಗ ಭೇಟಿ

ಲೋಕಸಭೆ ಚುನಾವಣೆ ಸಿದ್ಧತೆ: ಜನವರಿ 7ರಿಂದ ರಾಜ್ಯಗಳಿಗೆ ಚುನಾವಣಾ ಆಯೋಗ ಭೇಟಿ

- Advertisement -
- Advertisement -

ಮುಂದಿನ ವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡುವ ಮೂಲಕ ಚುನಾವಣಾ ಆಯೋಗವು (ಇಸಿ) ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ಧತೆಯನ್ನು ಪರಿಶೀಲಿಸಲು ಪ್ರಾರಂಭಿಸಲಿದೆ ಎಂದು ತಿಳಿದುಬಂದಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ, ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರನ್ನೊಳಗೊಂಡ ಆಯೋಗವು ಜನವರಿ 7 ಮತ್ತು 10 ರ ನಡುವೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪರಿಶೀಲಿಸಲಿದೆ. ಭೇಟಿಗೂ ಮುನ್ನ, ಉಪ ಚುನಾವಣಾ ಆಯುಕ್ತರು ಜನವರಿ 6 ರಂದು ಎರಡು ರಾಜ್ಯಗಳಲ್ಲಿ ಸಿದ್ಧತೆಗಳ ಬಗ್ಗೆ ಸಂಪೂರ್ಣ ಆಯೋಗಕ್ಕೆ ಮಾಹಿತಿ ನೀಡಲಿದ್ದಾರೆ.

ಉಪಚುನಾವಣಾ ಆಯುಕ್ತರು ಈಗಾಗಲೇ ಬಹುತೇಕ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯ ಸಿದ್ಧತೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ರಾಜಕೀಯ ಪಕ್ಷಗಳು, ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು. ಅದರ ಬೂತ್ ಮಟ್ಟದ ಚುನಾವಣಾ ಸಿಬ್ಬಂದಿಗಳನ್ನು ಭೇಟಿ ಮಾಡಲು ಚುನಾವಣೆಗಳಿಗೆ ಮುಂಚಿತವಾಗಿ ರಾಜ್ಯಗಳ ಪ್ರವಾಸವನ್ನು ಕೈಗೊಳ್ಳುವುದು ಚುನಾವಣಾ ಆಯೋಗದ ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ, ಆಯೋಗದ ಅಧಿಕಾರಿಗಳು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಇತ್ತೀಚೆಗೆ ವಿಧಾನಸಭೆ ಚುನಾವಣೆ ನಡೆದ ರಾಜ್ಯಗಳನ್ನು ಪ್ರವಾಸ ಪಟ್ಟಿಯಿಂದ ಬಿಟ್ಟುಬಿಡಬಹುದು.

2019 ರಲ್ಲಿ, ಲೋಕಸಭೆ ಚುನಾವಣೆಯನ್ನು ಮಾರ್ಚ್ 10 ರಂದು ಘೋಷಿಸಲಾಯಿತು. ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಸಲಾಯಿತು. ಮೇ 23 ರಂದು ಮತ ಎಣಿಕೆ ಮಾಡಲಾಯಿತು.

ಇದನ್ನೂ ಓದಿ; ಪೋಕ್ಸೋ ತೀರ್ಪು; ಕೊಲ್ಕತ್ತಾ ಹೈಕೋರ್ಟ್ ತಪ್ಪು ಸಂದೇಶ ರವಾನಿಸುತ್ತಿದೆ: ಸುಪ್ರೀಂ ಆಕ್ಷೇಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಮತಾ ಕುರಿತು ಆಕ್ಷೇಪಾರ್ಹ ಟೀಕೆ; ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗಕ್ಕೆ...

0
ಸಾರ್ವಜನಿಕ ರ‍್ಯಾಲಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ಆರೋಪಿಸಿ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ ಚುನಾವಣಾ...