ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಆರಂಭವಾದ ಅಂಚೆ ಮತಗಳ ಎಣಿಕೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಆರಂಭೀಕ ಮುನ್ನಡೆ ಸಾಧಿಸಿದೆ.
ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ದೊರಕಲಿದ್ದು, ಸಂಜೆಯೊಳಗೆ ಎಲ್ಲ ಕ್ಷೇತ್ರಗಳಲ್ಲೂ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ.
ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಮುನ್ನಡೆ ಸಾಧಿಸಿದ್ದಾರೆ.
ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಕೂಡ 188 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಹಿನ್ನಡೆಯಾಗಿದೆ.
ತುಮಕೂರು ಲೋಕಸಭಾ ಕ್ಷೇತ್ರದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥೀ ವಿ. ಸೋಮಣ್ಣ ಅಲ್ಪ ಮುನ್ನಡೆ ಸಾಧಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ. ತುಕರಾಮ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್, ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ, ಮೈಸೂರಿನಲ್ಲಿ ಯಧುವೀರ್ ಒಡೆಯರ್ ಮುನ್ನಡೆ ಅರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ; ಲೋಕಸಭೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭ


