Homeಮುಖಪುಟಲೋಕಸಭಾ ಚುನಾವಣೆ 2024: ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ಗೋವಿಂದ

ಲೋಕಸಭಾ ಚುನಾವಣೆ 2024: ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ಗೋವಿಂದ

- Advertisement -
- Advertisement -

ಬಾಲಿವುಡ್ ನಟ ಗೋವಿಂದ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆಗೆ ಗುರುವಾರ ಸೇರ್ಪಡೆಗೊಂಡಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಅವರು ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.

ಚಿತ್ರರಂಗದ ವಿರಾಮದ ನಂತರ ಗೋವಿಂದ ಅವರು ರಾಜಕೀಯಕ್ಕೆ ಮರಳುತ್ತಿರುವ ಕಾರಣ ಮುಂಬೈ ವಾಯವ್ಯ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಗೋವಿಂದ ಅವರು 2004 ರಲ್ಲಿ ಮುಂಬೈ ಉತ್ತರ ಲೋಕಸಭೆಯಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಬಿಜೆಪಿಯ ರಾಮ್ ನಾಯಕ್ ಅವರನ್ನು ಸೋಲಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ನಂತರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ಸಂಪೂರ್ಣ ವಿರಾಮ ತೆಗೆದುಕೊಂಡಿದ್ದರು.

“ನಾನು ಶಿವಸೇನೆಗೆ ಸೇರುತ್ತಿದ್ದೇನೆ, ಇದು ದೇವರ ಆಶೀರ್ವಾದವಾಗಿದೆ. ನಾನು ಮತ್ತೆ ರಾಜಕೀಯಕ್ಕೆ ಬರುವುದಿಲ್ಲ ಎಂದು ನಾನು ಭಾವಿಸಿದ್ದೆ” ಎಂದು ಪಕ್ಷಕ್ಕೆ ಸೇರ್ಪಡೆಗೊಂಡಾಗ ಗೋವಿಂದ ಹೇಳಿದರು. “ಏಕನಾಥ್ ಶಿಂಧೆ ನೇತೃತ್ವದಲ್ಲಿ ಮುಂಬೈ ನಗರವು ಈಗ ಸ್ವಚ್ಛವಾಗಿ ಮತ್ತು ಉತ್ತಮವಾಗಿ ಕಾಣುತ್ತದೆ” ಎಂದರು.

ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎಂದು ನಟ ಗೋವಿಂದ ಪೋಷಕರು ಹೇಳಿದ್ದಾರೆ.

ಗೋವಿಂದ ಅವರು ಕಳೆದ ವಾರ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ ನಂತರ ರಾಜಕೀಯದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್‌ನಲ್ಲಿ ಆಸಕ್ತಿ ಹೊಂದಿರುತ್ತಾರೆ ಎಂಬ ಊಹಾಪೋಹಗಳು ಹರಿದಾಡಲು ಪ್ರಾರಂಭಿಸಿದವು. ಗುರುವಾರ ಬೆಳಿಗ್ಗೆ, ಶಿವಸೇನಾ ನಾಯಕ ಕೃಷ್ಣ ಹೆಡ್ಗೆ ಅವರು ನಟನನ್ನು ಜುಹುವಿನ ನಿವಾಸದಲ್ಲಿ ಭೇಟಿಯಾದರು.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಏಪ್ರಿಲ್ 1ರವರೆಗೆ ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...