Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...