Homeಮುಖಪುಟಲೋಕಸಭಾ ಚುನಾವಣೆ 2024: ರಾಜೀವ್ ಚಂದ್ರಶೇಖರ್ ನೀಡಿದ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಶಶಿ ತರೂರ್

ಲೋಕಸಭಾ ಚುನಾವಣೆ 2024: ರಾಜೀವ್ ಚಂದ್ರಶೇಖರ್ ನೀಡಿದ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಶಶಿ ತರೂರ್

- Advertisement -
- Advertisement -

ಕೇಂದ್ರ ಸಚಿವ, ಕೇರಳದ ತಿರುವನಂತಪುರಂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಲು ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದು, ಬಿಜೆಪಿ ಅಭ್ಯರ್ಥಿ ಸವಾಲನ್ನು ತರೂರ್ ಸ್ವೀಕರಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೀವ್ ಚಂದ್ರಶೇಖರ್, “ಆಲೋಚನೆಗಳು, ಅಭಿವೃದ್ಧಿ ಮತ್ತು ಯಾರ ಟ್ರ್ಯಾಕ್ ರೆಕಾರ್ಡ್ ಉತ್ತಮವಾಗಿದೆ ಎಂಬುದರ ಕುರಿತು ನಾನು (ಶಶಿ ತರೂರ್ ಅವರೊಂದಿಗೆ) ಚರ್ಚೆಗೆ ಸಿದ್ಧನಿದ್ದೇನೆ. ನಾನು ಮೊದಲಿನಿಂದಲೂ ಇದನ್ನು ಹೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ತಿರುವನಂತಪುರಂ ಹಾಲಿ ಸಂಸದ ತರೂರ್ ಅವರು ರಾಜೀವ್ ಚಂದ್ರಶೇಖರ್ ಅವರ ಸವಾಲಿನ ವೀಡಿಯೊವನ್ನು ಹಂಚಿಕೊಂಡಿದ್ದು, “ರಾಜಕೀಯ ಮತ್ತು ಅಭಿವೃದ್ಧಿಯನ್ನು ಚರ್ಚಿಸೋಣ” ಎಂದು ಬರೆದಿದ್ದಾರೆ.

“ಹೌದು, ನಾನು ಚರ್ಚೆಯನ್ನು ಸ್ವಾಗತಿಸುತ್ತೇನೆ. ಆದರೆ, ತಿರುವನಂತಪುರದ ಜನರಿಗೆ ಇದುವರೆಗೂ ಯಾರು ಚರ್ಚೆಯಿಂದ ನುಣುಚಿಕೊಳ್ಳುತ್ತಿದ್ದಾರೆಂದು ತಿಳಿದಿದ್ದಾರೆ. ರಾಜಕೀಯ ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ” ಎಂದು ತರೂರ್ ಹೇಳಿದರು.

“ನಾವು ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಕೋಮುವಾದ ಮತ್ತು ಬಿಜೆಪಿಯ 10 ವರ್ಷಗಳ ದ್ವೇಷದ ರಾಜಕಾರಣದ ಬಗ್ಗೆ ಚರ್ಚೆ ಮಾಡೋಣ. ತಿರುವನಂತಪುರಂನ ಅಭಿವೃದ್ಧಿ ಮತ್ತು ಕಳೆದ 15 ವರ್ಷಗಳಲ್ಲಿ ನಾವು ಮಾಡಿದ ಗೋಚರ ಪ್ರಗತಿಯ ಬಗ್ಗೆಯೂ ಚರ್ಚಿಸೋಣ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ತಿರುವನಂತಪುರಂ ಲೋಕಸಭಾ ಕ್ಷೇತ್ರವು ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಸಾಕ್ಷಿಯಾಗಿದ್ದು, ಎರಡೂ ಪಕ್ಷಗಳು ಇದನ್ನು ಪ್ರತಿಷ್ಠೆಯ ಕಣವೆಂದು ಪರಿಗಣಿಸಿವೆ. ಇತ್ತೀಚಿನ ಬೆಳವಣಿಗೆಯೆಂದರೆ, ಇಬ್ಬರೂ ನಾಯಕರು ಚುನಾವಣಾ ಆಯೋಗಕ್ಕೆ ಪರಸ್ಪರ ದೂರುಗಳನ್ನು ದಾಖಲಿಸಿಕೊಂಡಿದ್ದು, ನಿರೀಕ್ಷಿತ ಮತ ಬ್ಯಾಂಕ್ ಇಲ್ಲದಿದ್ದರೂ ಬಿಜೆಪಿ ಇಲ್ಲಿ ಗೆಲ್ಲುವುದಕ್ಕೆ ತಂತ್ರಗಾರಿಕೆ ನಡೆಸುತ್ತಿದೆ.

ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಅಭ್ಯರ್ಥಿ ಶಶಿ ತರೂರ್‌ ಅವರು ಮತಕ್ಕಾಗಿ ಹಣ ನೀಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಚಂದ್ರಶೇಖರ್‌ ದೂರಿನಲ್ಲಿ ಆರೋಪಿಸಿದ್ದಾರೆ. ತರೂರ್ ಅವರ ತಂಡ ಆರೋಪವನ್ನು ನಿರಾಕರಿಸಿದ್ದು, ಅವರು ಅಂತಹ ಹೇಳಿಕೆಯನ್ನು ಎಂದಿಗೂ ನೀಡಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಎನ್‌ಡಿಎ ಅಭ್ಯರ್ಥಿ ಚಂದ್ರಶೇಖರ್‌ ವಿರುದ್ಧ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ದೂರು ದಾಖಲಿಸಿದ್ದು, ನಾಮಪತ್ರದ ಜತೆಗೆ ಸುಳ್ಳು ಅಫಿಡವಿಟ್‌ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಮತ್ತು ತರೂರ್ ಅವರಲ್ಲದೆ, ಸಿಪಿಐ ಹಿರಿಯ ಪನ್ನಯನ್ ರವೀಂದ್ರನ್ ಅವರು ಎಡ-ರಂಗದ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಕೇರಳದಲ್ಲಿ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ; ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...