Homeಮುಖಪುಟಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದಿದ್ದ ಭೋಜ್‌ಪುರಿ ಗಾಯಕ-ನಟ ಪವನ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಶನಿವಾರ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ ಅಸನ್ಸೋಲ್‌ ಕ್ಷೇತ್ರದ ಟಿಕೆಟ್ ಪವನ್ ಸಿಂಗ್‌ಗೆ ನೀಡಲಾಗಿತ್ತು. ಆದರೆ, ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪವನ್ ಸಿಂಗ್ ಭಾನುವಾರ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷದ ಉನ್ನತ ನಾಯಕತ್ವಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ. ಪಕ್ಷವು ನನ್ನನ್ನು ನಂಬಿ ಅಸನ್ಸೋಲ್‌ನ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ, ಕಾರಣಾಂತರಗಳಿಂದ ನಾನು ಅಸನ್ಸೋಲ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗುವಾಗುತ್ತಿಲ್ಲ” ಎಂದಿದ್ದಾರೆ.

ಪವನ್ ಸಿಂಗ್‌ ಸ್ಪರ್ಧೆಯಿಂದ ಹಿಂದೆ ಸರಿದಿರುವ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ, “ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗುವ ಮೊದಲೇ ಬಿಜೆಪಿ 1 ಸ್ಥಾನವನ್ನು ಬಿಟ್ಟುಕೊಟ್ಟಿದೆ” ಎಂದು ಹೇಳಿದ್ದಾರೆ.

ಪವನ್‌ ಸಿಂಗ್‌ಗೆ ಟಿಕೆಟ್ ನೀಡಿದ್ದರ ಕುರಿತು ಪ್ರತಿಕ್ರಿಯಿಸಿದ್ದ ಅಸನ್ಸೋಲ್‌ನ ಮಾಜಿ ಸಂಸದ ಹಾಗೂ ಪಶ್ಚಿಮ ಬಂಗಾಳದ ಹಾಲಿ ಸಚಿವ ಬಾಬುಲ್ ಸುಪ್ರಿಯೋ, “ಪವನ್ ಜಿ ಅವರಿಗೆ ಅಸನ್ಸೋಲ್‌ಗೆ ಸ್ವಾಗತ. ನಾನು ಅವರ ಬಗ್ಗೆ ಪರಿಶೀಲನೆ ಮಾಡಿಲ್ಲ, ಮಾಡಲು ಹೋಗೋದು ಇಲ್ಲ. ಆದರೆ, ಕೆಲವೊಂದು ವಿಡಿಯೋಗಳು ನಾನು ಹಂಚಿಕೊಂಡಿದ್ದೇನೆ. ಅದರಲ್ಲಿ ಪವನ್ ಅವರು ಮಹಿಳೆಯರಿಗೆ ಯಾವ ರೀತಿ ಗೌರವ ಕೊಡುತ್ತಾರೆ ಎನ್ನುವುದು ಸ್ಪಷ್ಟವಾಗಿ ಇದೆ. ಖಂಡಿತವಾಗಿಯೂ ಪ್ರಧಾನಿ ಮೋದಿ ಅವರು ಪವನ್ ಪರ ಪ್ರಚಾರಕ್ಕೆ ಬರಬಹುದು” ಎಂದು ಟಾಂಗ್ ನೀಡಿದ್ದರು.

ಭೋಜ್‌ಪುರಿ ನಟ ಮತ್ತು ಗಾಯಕನಾಗಿರುವ ಪವನ್ ಸಿಂಗ್ ತನ್ನ ಚಿತ್ರ ಮತ್ತು ಹಾಡುಗಳಲ್ಲಿ ಬೆಂಗಾಲಿ ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ್ದಾರೆ ಎಂಬ ಆರೋಪವಿದೆ. ಹಾಗಾಗಿ, ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಬೆನ್ನಲ್ಲೇ ಟಿಎಂಸಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಅಲ್ಲದೆ, ಪಶ್ಚಿಮ ಬಂಗಾಳದ ಸಂದೇಶ್‌ ಖಾಲಿಯಲ್ಲಿ ಸ್ಥಳೀಯ ಟಿಎಂಸಿ ನಾಯಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಮುಂದಿಟ್ಟುಕೊಂಡು ಕಳೆದ ಕೆಲ ದಿನಗಳಿಂದ ಬಿಜೆಪಿ ದೊಡ್ಡ ಮಟ್ಟದ ಹೋರಾಟ ನಡೆಸಿತ್ತು. ಈ ಬೆನ್ನಲ್ಲೇ ಮಹಿಳೆಯರನ್ನುನ ಕೀಳಾಗಿ ಚಿತ್ರಿಸಿದ ಆರೋಪ ಹೊತ್ತಿರುವ ಪವನ್ ಸಿಂಗ್‌ಗೆ ಟಿಕೆಟ್ ನೀಡಿರುವುದು ಸ್ವತಃ ಬಿಜೆಪಿ ನಾಯಕರ ಅಸಮಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ಎಲ್ಲಾ ಕಾರಣಕ್ಕೆ ಪವನ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿರುವ ಸಾಧ್ಯತೆ ಇದೆ.

ಇದನ್ನೂ ಓದಿ : ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ: ತೇಜಸ್ವಿ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...