Homeಮುಖಪುಟಲೋಕಸಭೆಯಲ್ಲಿ 'ಅಗೌರವ'ದ ಹೇಳಿಕೆ - ಸಚಿವ ಪಿಯೂಷ್ ಗೋಯಲ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್

ಲೋಕಸಭೆಯಲ್ಲಿ ‘ಅಗೌರವ’ದ ಹೇಳಿಕೆ – ಸಚಿವ ಪಿಯೂಷ್ ಗೋಯಲ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್‌ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಕಾಂಗ್ರೆಸ್ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ತನ್ನ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಎನ್‌ಡಿಎ ಸರ್ಕಾರವು ಸೊರೊಸ್‌ ಅವರನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಮಣಿಪುರ ಇಡೀ ಮಾನವೀಯ ಬಿಕ್ಕಟ್ಟಿನಲ್ಲಿದೆ. ರಾಜ್ಯದಾದ್ಯಂತ ಜನರು ಭಯ ಮತ್ತು ಅನಿಶ್ಚಿತತೆಯಿಂದ ಬದುಕುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮೇ 2023 ರ ವೇಳೆ ರಾಜ್ಯದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್ಸ್ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಪ್ರಾರಂಭವಾದಾಗಿನಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, 22 ನವೆಂಬರ್‌ನಿಂದ ಕನಿಷ್ಠ 7 ಜನರು ಕೊಲ್ಲಲ್ಪಟ್ಟಿದ್ದಾರೆ.

ಮಣಿಪುರದ ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ನಿಭಾಯಿಸಲಾಗುತ್ತಿದೆ ಎಂದು ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿದ್ದಾರೆ. “ಅವರು ಇದಕ್ಕೆ [ಕಾಂಗ್ರೆಸ್] ಪ್ರತಿಕ್ರಿಯಿಸಬೇಕು. ಜಾರ್ಜ್ ಸೊರೊಸ್ ಮತ್ತು ಈ ಎಲ್ಲಾ ಆಂತರಿಕ ಗೊಂದಲಗಳ ನಡುವೆ ಏನು ಸಂಬಂಧವಿದೆ ಎಂಬುದನ್ನು ರಾಷ್ಟ್ರಕ್ಕೆ ತಿಳಿಸಬೇಕು. ದೇಶದಲ್ಲಿನ ಆಂತರಿಕ ಗೊಂದಲಗಳಿಗೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಿದ್ದು, ಅವರು ವಿದೇಶಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಪರಿಸ್ಥಿತಿಗೆ ಕಾಂಗ್ರೆಸ್ “ಮಾತ್ರ ಹೊಣೆ” ಎಂದು ಗೋಯಲ್ ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಅವರಿಗೆ ಏನು ಸಂಬಂಧವಿದೆ?… ಇದಕ್ಕೆ ಕಾರಣ ಕಾಂಗ್ರೆಸ್ ಪಕ್ಷ ಮತ್ತು ಜಾರ್ಜ್ ಸೊರೊಸ್ ಅವರಂತಹ ಅನುದಾನಿತ ಸಂಸ್ಥೆಗಳು ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಈ ಹೇಳಿಕೆ ವಿರುದ್ಧ ಗುರುವಾರ ಬಿರ್ಲಾ ಅವರಿಗೆ ನೀಡಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಟಾಗೋರ್ ಅವರು, ಸಚಿವ ಗೊಗೋಯ್‌ ಅವರ ಟೀಕೆಗಳನ್ನು ಉಲ್ಲೇಖಿಸಿದ್ದಾರೆ. “ಸಚಿವರು ಸದನದಲ್ಲಿ ಇಂತಹ ಅವಹೇಳನಕಾರಿ ಉಲ್ಲೇಖಗಳನ್ನು ಮಾಡಲು ಅವಕಾಶ ನೀಡಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ಹೇಳಿದರು. ಸಚಿವರ ಈ ಟೀಕೆಗಳು “ಮಾನಹಾನಿಕರ ಮತ್ತು ಅಮಾನವೀಯ” ಎಂದು ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಇದನ್ನೂ ಓದಿ: ‘ಒಬ್ಬ ವ್ಯಕ್ತಿಗಾಗಿ, 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...