Homeಮುಖಪುಟಲೋಕಸಭೆಯಲ್ಲಿ ಜಮ್ಮು ಕಾಶ್ಮೀರ ಮೀಸಲಾತಿ, ಮರುಸಂಘಟನೆ ತಿದ್ದುಪಡಿ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ಜಮ್ಮು ಕಾಶ್ಮೀರ ಮೀಸಲಾತಿ, ಮರುಸಂಘಟನೆ ತಿದ್ದುಪಡಿ ಮಸೂದೆ ಅಂಗೀಕಾರ

- Advertisement -
- Advertisement -

ಲೋಕಸಭೆಯಲ್ಲಿ ಇಂದು (ಡಿಸೆಂಬರ್ 6) ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಕಾನೂನುಗಳನ್ನು ತಿದ್ದುಪಡಿ ಮಾಡುವ ಎರಡು ಮಸೂದೆಗಳು ಅಂಗೀಕಾರಗೊಂಡಿವೆ.

ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಎಂಬ ಮಸೂದೆಗಳನ್ನು ಈ ವರ್ಷದ ಜುಲೈನಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗಿತ್ತು ಚರ್ಚೆಯ ಬಳಿಕ ಇಂದು ಅಂಗೀಕಾರಗೊಂಡಿವೆ.

ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ಕಾಯಿದೆ, 2004 ಅನ್ನು ಮಾರ್ಪಡಿಸಲಿದೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಜನರಿಗೆ ಉದ್ಯೋಗ ಮತ್ತು ವೃತ್ತಿಪರ ಸಂಸ್ಥೆಗಳ ಪ್ರವೇಶಾತಿಗಳಲ್ಲಿ ಮೀಸಲಾತಿ ನೀಡಲಿದೆ.

ಕೇಂದ್ರಾಡಳಿತ ಪ್ರದೇಶವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಘೋಷಿಸಿದಂತೆ “ದುರ್ಬಲ ಮತ್ತು ಹಿಂದುಳಿದ ವರ್ಗಗಳು” ಎಂಬ ಪದವನ್ನು “ಇತರ ಹಿಂದುಳಿದ ವರ್ಗಗಳು” ಎಂಬ ಪದದೊಂದಿಗೆ ಬದಲಿಸುವುದು ಈ ಮಸೂದೆಯ ಪ್ರಮುಖ ಅಂಶವಾಗಿದೆ. ಈ ಮಸೂದೆಯು ದುರ್ಬಲ ಮತ್ತು ಹಿಂದುಳಿದ ವರ್ಗಗಳ ಮೂಲ ವ್ಯಾಖ್ಯಾನವನ್ನು ತೆಗೆದು ಹಾಕುತ್ತದೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಅನ್ನು ತಿದ್ದುಪಡಿ ಮಾಡುತ್ತದೆ. ಇದು ರಾಜ್ಯವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ಮರುಸಂಘಟನೆ ಮಾಡಲು ಅನುಕೂಲ ಮಾಡಿಕೊಡಲಿದೆ. ಈ ಮಸೂದೆಯು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು 83 ರಿಂದ 90 ಕ್ಕೆ ಹೆಚ್ಚಿಸಲು ಅನುಕೂಲ ಮಾಡಲಿದೆ.

ಹೊಸ ವಿಧಾನಸಭಾ ಸ್ಥಾನಗಳ ಪೈಕಿ ಏಳು ಪರಿಶಿಷ್ಟ ಜಾತಿಯ ಸದಸ್ಯರಿಗೆ ಮತ್ತು ಒಂಬತ್ತು ಸ್ಥಾನಗಳನ್ನು ಪರಿಶಿಷ್ಟ ಪಂಗಡದ ಶಾಸಕರಿಗೆ ಮೀಸಲಿಡಲಾಗುವುದು. ಕಾಶ್ಮೀರಿ ವಲಸಿಗ ಸಮುದಾಯದಿಂದ ಇಬ್ಬರು ಸದಸ್ಯರನ್ನು ಶಾಸಕಾಂಗ ಸಭೆಗೆ ನಾಮನಿರ್ದೇಶನ ಮಾಡುವ ಈ ತಿದ್ದುಪಡಿ ಮಸೂದೆಯು ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರ ನೀಡಲಿದೆ. ಲೆಫ್ಟಿನೆಂಟ್ ಗವರ್ನರ್‌ ಒಬ್ಬರು ಮಹಿಳೆ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಿಂದ ಸ್ಥಳಾಂತರಗೊಂಡ ವ್ಯಕ್ತಿಗಳನ್ನು ಪ್ರತಿನಿಧಿಸುವ ಒಬ್ಬ ಒಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ಇದನ್ನೂ ಓದಿ : ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ 10 ಬಿಜೆಪಿ ಸಂಸದರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...