Homeಮುಖಪುಟಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆ ‘ನಾರಿ ಶಕ್ತಿ ವಂದನ ಅಧಿನಿಯಮ’ ಲೋಕಸಭೆಯಲ್ಲಿ ಬಹುಮತದಿಂದ ಅಂಗೀಕಾರವಾಗಿದೆ.

ಮಸೂದೆಯ ಪರವಾಗಿ 454 ಮತಗಳು ಚಲಾವಣೆಯಾಗಿದ್ದು, ಮಸೂದೆ ವಿರುದ್ಧ  2 ಮತಗಳು ಚಲಾವಣೆಯಾಗಿದೆ. ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಲು ಮೂರನೇ ಎರಡರಷ್ಟು ಸಂಖ್ಯೆಯ ಬೆಂಬಲ ಅಗತ್ಯವಿತ್ತು.

ಇದಕ್ಕೂ ಮೊದಲು ಮಸೂದೆಯ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಮಸೂದೆಯು ಪ್ರಸ್ತುತ ಸಾಮಾನ್ಯ, ಎಸ್‌ಸಿ, ಎಸ್‌ಟಿ ಎಂದು ಮೂರು ವರ್ಗಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನದ 3ನೇ ದಿನವು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಗೆ ಸಾಕ್ಷಿಯಾಯಿತು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಿನ್ನೆ ಮಂಡಿಸಲಾಗಿದೆ. ಸತತ ಎರಡು ದಿನಗಳ ಚರ್ಚೆಯ ಬಳಿಕ ಇಂದು ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ.

ಮಸೂದೆಯನ್ನು ಕಾಂಗ್ರೆಸ್‌ ಬೆಂಬಲಿಸಿತ್ತು, ಈ ಕುರಿತು ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ,  ಮಹಿಳಾ ಮೀಸಲು ಮಸೂದೆಯನ್ನು ಸ್ವಾಗತಿಸುತ್ತೇನೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಇದರಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಇದು ಅಪೂರ್ಣವಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮಹಿಳಾ ಮೀಸಲಾತಿ ಬಿಲ್‌: ಒಬಿಸಿಗಳನ್ನು ಸೇರ್ಪಡೆಗೆ ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

0
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ‘ಕೆಳಮಟ್ಟದ ವೈಯಕ್ತಿಕ ಟೀಕೆ'ಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ, ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ...