Homeಮುಖಪುಟಲೋಕಸಭೆ ಫಲಿತಾಂಶ 'ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ': ಖರ್ಗೆ

ಲೋಕಸಭೆ ಫಲಿತಾಂಶ ‘ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ’: ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಜನಾದೇಶವು ವಿಭಜನೆ ಮತ್ತು ದ್ವೇಷ ರಾಜಕೀಯದ ‘ನಿರ್ಣಾಯಕ ನಿರಾಕರಣೆ’. ಇಂಡಿಯಾ ಒಕ್ಕೂಟ ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ” ಕಾಂಗ್ರೆಸ್ ಮತ್ತೆ ಪುಟಿದೇಳುತ್ತಿರುವ ಸಂದರ್ಭದ ಕೆಲ ರಾಜ್ಯಗಳಲ್ಲಿ ತನ್ನ ಸಾಮರ್ಥ್ಯ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿಲ್ಲ. ಅಲ್ಲಿ ಸ್ವಲ್ಪ ಸಮಯ ಬೇಕಾಗಬಹುದು ಎಂದಿದ್ದಾರೆ.

“ನಾವು ಈ ಹಿಂದೆ ವಿಧಾನಸಭಾ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿಯೂ ನಮ್ಮ ಸಾಧನೆ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ರಾಜ್ಯಗಳ ಬಗ್ಗೆ ಪ್ರತ್ಯೇಕ ಚರ್ಚೆ ಶೀಘ್ರದಲ್ಲೇ ನಡೆಸಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ ಪರ ಒಲವು ಹೊಂದಿರುವ ರಾಜ್ಯಗಳಲ್ಲಿ ನಮಗೆ ಇನ್ನೂ ಅವಕಾಶವಿದೆ. ಈ ಅವಕಾಶಗಳನ್ನು ನಾವು ನಮ್ಮ ಸ್ವಂತ ಲಾಭಕ್ಕಾಗಿ ಬಳಸದೆ, ನಮ್ಮ ಜನರ ಅನುಕೂಲಕ್ಕಾಗಿ ಬಳಸಿಕೊಳ್ಳಬೇಕು. ಈ ಕಾರ್ಯಯವನ್ನು ಶೀಘ್ರದಲ್ಲೇ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಪಕ್ಷ ಅಧಿಕಾರದಲ್ಲಿದ್ದರೂ, ಇಲ್ಲದಿದ್ದರೂ ಜನರ ನಡುವೆ 365 ದಿನದ 24 ಗಂಟೆಯೂ ಕೆಲಸ ನಿರ್ವಹಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡಿದ ನಾಯಕರು ಮತ್ತು ಕಾರ್ಯಕರ್ತರ ಇಚ್ಛಾಶಕ್ತಿ ಮತ್ತು ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ ಅಭಿನಂದಿಸಿದೆ.

“ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ವಿರುದ್ಧ ಜನರು ಧ್ವನಿ ಎತ್ತಿದ್ದಾರೆ. ಕಳೆದ 10 ವರ್ಷಗಳ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.

“ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಮಣಿಪುರದ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲೂ ಪಕ್ಷ ಸ್ಥಾನಗಳನ್ನು ಪಡೆದುಕೊಂಡಿದೆ” ಎಂದಿದ್ದಾರೆ.

“ಮಹಾರಾಷ್ಟ್ರದಲ್ಲಿ ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದೇವೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಸಮಾಜದ ಎಲ್ಲಾ ವರ್ಗಗಳ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಲ್ಲದೆ, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವಿರುವ ಸ್ಥಾನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಾನಗಳಲ್ಲಿಯೂ ಪಕ್ಷವು ಹೆಚ್ಚಳ ಕಂಡಿದೆ” ಎಂದು ಹೇಳಿದ್ದಾರೆ

ನಗರ ಪ್ರದೇಶಗಳಲ್ಲೂ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ತೋರಿಸಬೇಕಿದೆ. ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಈ ಚುನಾವಣೆಯಲ್ಲಿ ಕೆಲಸ ಮಾಡಿದೆ. ಆಯಾ ರಾಜ್ಯಗಳಲ್ಲಿ ಪಕ್ಷಗಳು ತನ್ನ ಶಕ್ತಿ ತೋರಿಸಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳಿಗೂ ನೆರವಾಗಿದೆ. ನಾವು ಚುನಾವಣಾ ಪ್ರಚಾರದ ಸಂದರ್ಭ ಪ್ರಸ್ತಾಪಿಸಿದ ವಿಷಯಗಳು ಭಾರತದ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ನಾವು ಸಂಸತ್ತಿನಲ್ಲಿ ಮತ್ತು ಹೊರಗೆ ಆ ವಿಷಯಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸಬೇಕು ಎಂದಿದ್ದಾರೆ.

ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಪಕ್ಷದ ಹಿರಿಯ ನಾಯಕರು ಮತ್ತು ಸಿಡಬ್ಲ್ಯೂಸಿ ಸದಸ್ಯರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಕ್ಷದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಿ ಸಂಘಟನೆ ಕ್ರಮಗಳನ್ನು ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು, ಇತರ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಇಂದು (ಜೂನ್‌ 8) ಸಂಜೆ 5.30ಕ್ಕೆ ಲೋಕಸಭೆ ಮತ್ತು ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಲಿದೆ.

ಇದನ್ನೂ ಓದಿ : ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...