Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ

- Advertisement -
- Advertisement -

ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು (ಮಾ.21) ಬಿಡುಗಡೆ ಮಾಡಿದೆ.

ಒಟ್ಟು 9 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ತಮಿಳುನಾಡನ್ನು ಮಾತ್ರ ಒಳಗೊಂಡಿದೆ. ತೆಲಂಗಾಣದ ರಾಜ್ಯಪಾಲೆ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ತಮಿಳಿಸೈ ಸೌಂದರರಾಜನ್‌, ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೆಸರು ಪಟ್ಟಿಯಲ್ಲಿದೆ.

ತಮಿಳಿಸೈ ಸೌಂದರರಾಜನ್ ಅವರಿಗೆ ಚೆನ್ನೈ ದಕ್ಷಿಣದ ಟಿಕೆಟ್ ನೀಡಲಾಗಿದ್ದು, ನೀಲಗಿರಿಯಿಂದ ಕೇಂದ್ರ ಸಚಿವ ಎಲ್ ಮುರುಗನ್, ಕೊಯಮತ್ತೂರಿನಿಂದ ಕೆ ಅಣ್ಣಾಮಲೈ ಮತ್ತು ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ.

ಚೆನ್ನೈ ಸೆಂಟ್ರಲ್‌ನಿಂದ ವಿನೋಜ್ ಪಿ ಸೆಲ್ವಂ, ವೆಲ್ಲೂರಿನಿಂದ ಎಸಿ ಷಣ್ಮುಗಂ, ಕೃಷ್ಣಗಿರಿಯಿಂದ ಸಿ ನರಸಿಂಹನ್ ಮತ್ತು ತಿರುನಲ್ವೇಲಿಯಿಂದ ನೈನಾರ್ ನಾಗೇಂದ್ರನ್ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ.

ಬಿಜೆಪಿ ಪ್ರಕಟಿಸಿದ್ದ ಎರಡನೇ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರಿತ್ತು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಖಟ್ಟರ್, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಬಸವರಾಜ್ ಬೊಮ್ಮಾಯಿ ಅವರಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿತ್ತು.

ಬಿಜೆಪಿ ಮೊದಲ ಪಟ್ಟಿಯಲ್ಲಿ ವಿವಿಧ ರಾಜ್ಯಗಳ ಒಟ್ಟ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಎರಡನೇ ಪಟ್ಟಿಯಲ್ಲಿ 72 ಮತ್ತು ಮೂರನೇ ಪಟ್ಟಿ 9 ಸೇರಿ 276 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ: ‘ರಾಜಕೀಯ ವಿರೋಧಿಗಳಷ್ಟೇ ಅಲ್ಲ, ಅವರು ಮನುಕುಲದ ಶತ್ರುಗಳು..’; ಬಿಜೆಪಿ ವಿರುದ್ಧ ಸ್ಟಾಲಿನ್ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...