ಲೋಕಸಭೆ ಚುನಾವಣೆಯಲ್ಲಿ ದೇಶದ ಗಮನ ಸೆಳೆದ ಕ್ಷೇತ್ರಗಳ ಪೈಕಿ ಉತ್ತರ ಪ್ರದೇಶದ ಫೈಝಾಬಾದ್ (ಅಯೋಧ್ಯೆ) ಕೂಡ ಒಂದು. ಇಲ್ಲಿ ಅಭ್ಯರ್ಥಿಗಿಂತ ಕ್ಷೇತ್ರದ ವಿಚಾರಕ್ಕೆ ಚುನಾವಣೆ ಸುದ್ದಿಯಾಗಿತ್ತು. ಏಕೆಂದರೆ, ಬಿಜೆಪಿಯ ಪ್ರಮುಖ ರಾಜಕೀಯ ಅಸ್ತ್ರವಾದ ರಾಮ ಮಂದಿರ ಇದೇ ಕ್ಷೇತ್ರದಲ್ಲಿದೆ.
ಆದರೆ, ಈ ಸುದ್ದಿ ಬರೆಯುವ ಹೊತ್ತಿದೆ (10 ಗಂಟೆ) ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಲಲ್ಲು ಸಿಂಗ್ ಆರಂಭದಿಂದಲೂ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿಯ ಲಲ್ಲು ಸಿಂಗ್ 30 ಸಾವಿರದಷ್ಟು ಮತಗಳನ್ನು ಪಡೆದರೆ, ಸಮಾಜವಾದಿ ಪಕ್ಷದ ಅಭ್ಯರ್ಥಿ ಅವದೇಶ್ ಪ್ರಸಾದ್ 32 ಸಾವಿರದಷ್ಟು ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಬಹುಜನ ಸಮಾಜವಾದಿ ಪಕ್ಷದ ಸಚ್ಚಿದಾನಂದ ಪಾಂಡೆ 20 ಸಾವಿರದಷ್ಟು ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಹಲವು ವರ್ಷಗಳಿಂದ ಬಿಜೆಪಿ ರಾಮ ಮಂದಿರವನ್ನು ಚುನಾವಣಾ ಅಸ್ತ್ರವನ್ನಾಗಿಸಿದೆ. ಬಿಜೆಪಿ ಭರವಸೆ ಕೊಟ್ಟಂತೆ ವರ್ಷದ ಹಿಂದೆ ರಾಮ ಮಂದಿರ ನಿರ್ಮಾಣವೂ ಆಗಿದೆ. ಹಾಗಾಗಿ, ಇಡೀ ದೇಶದ ಚುನಾವಣಾ ಪ್ರಕ್ರಿಯೆಯ ಮೇಲೆ ರಾಮ ಮಂದಿರ ಪ್ರಭಾವ ಬೀರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗಿನ ಟ್ರೆಂಡ್ ಪ್ರಕಾರ, ರಾಮಮಂದಿರ ಇರುವ ಫೈಝಾಬಾದ್ ಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆಯಾಗಿದೆ.
ಇದನ್ನೂ ಓದಿ : ಕೇರಳ, ಮಹಾರಾಷ್ಟ್ರ,ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಆರಂಭಿಕ ಮೇಲುಗೈ


