Homeಮುಖಪುಟಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಸೋಲಾಗಿದೆ. ಈ ಮೂಲಕ ಭಾರೀ ಮುಖಭಂಗ ಅನುಭವಿಸಿದ್ದಾರೆ.

ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಎರಡು ಭಾರೀ ಗೆದ್ದು ದೇಶದ ಗಮನ ಸೆಳೆದಿದ್ದ ಸ್ಮೃತಿ ಇರಾನಿ, ಈ ಬಾರಿಯೂ ಗೆಲ್ಲುವ ವಿಶ್ವಾಸ ಹೊಂದಿದ್ದರು. ಆದರೆ, ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ವಿರುದ್ಧ ಹೀನಾಯವಾಗಿ ಸೋತಿದ್ದಾರೆ.

2019ರಲ್ಲಿ ಅಮೇಥಿಯಲ್ಲಿ ಮೊದಲ ಬಾರಿ ಗೆದ್ದಿದ್ದ ಸ್ಮೃತಿ ಇರಾನಿ, ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಟೀಕಿಸುತ್ತಾ ಬಂದಿದ್ದರು. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೇಲಿ ಮಾಡಿದ್ದ ಇರಾನಿ, ತನ್ನನ್ನು ಸೋಲಿಸಲು ಯಾರಿಗೂ ಸಾಧ್ಯವಿಲ್ಲ ಅಂದುಕೊಂಡಿದ್ದರು. ಆದರೆ, ಮತದಾರರು ಸ್ಮೃತಿಗೆ ಸೋಲಿನ ರುಚಿ ತೋರಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಗೊತ್ತಾದಾಗ “ಚುನಾವಣೆಗೆ ಮುನ್ನವೇ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆ. ರಾಹುಲ್‌ ಗಾಂಧಿ ಸೋಲಿಗೆ ಹೆದರಿ ರಾಯ್‌ಬರೇಲಿಗೆ ಓಡಿದ್ದಾರೆ” ಎಂದು ಸ್ಮೃತಿ ಹೇಳಿದ್ದರು. ಆದರೆ, ಈಗ ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್‌ ಎದುರು ಸ್ಮೃತಿ ಹೀನಾಯವಾಗಿ ಸೋತಿದ್ದಾರೆ.

ಸಂಜೆ 5:30ರವರೆಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾದ ಅಂಕಿ ಅಂಶಗಳ ಪ್ರಕಾರ, ಕಾಂಗ್ರೆಸ್‌ನ ಕಿಶೋರಿ ಲಾಲ್‌ 5,24,892 ಮತಗಳನ್ನು ಪಡೆದಿದ್ದು, ಸ್ಮೃತಿ ಇರಾನಿ 3,63,626 ಮತಗಳನ್ನು ಗಳಿಸಿದ್ದಾರೆ. 1,61,266 ಮತಗಳ ಅಂತರದಲ್ಲಿ ಸ್ಮೃತಿ ಹಿನ್ನಡೆ ಅನುಭವಿಸಿದ್ದಾರೆ.

ಸ್ಮೃತಿ ಇರಾನಿ ಗುಜರಾತ್‌ನಿಂದ 2011ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದರು. ನಂತರ ಆಗಸ್ಟ್ 2017 ರಲ್ಲಿ ಮರು ಆಯ್ಕೆಯಾದರು. ಪ್ರಸ್ತುತ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಖಾತೆ ಸಚಿವರಾಗಿದ್ದಾರೆ. ಮೇ 2014 ಮತ್ತು ಜುಲೈ 2016 ರ ನಡುವೆ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜುಲೈ 2017 ರಿಂದ ಮೇ 2018 ರವರೆಗೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿದ್ದರು.

ಇದನ್ನೂ ಓದಿ : ತಲೆಕೆಳಗಾದ ಎಕ್ಸಿಟ್ ಪೋಲ್ ಸಮೀಕ್ಷೆ: ಲೈವ್ ಟಿವಿಯಲ್ಲಿ ಕಣ್ಣೀರಿಟ್ಟ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....