Homeಮುಖಪುಟಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

- Advertisement -
- Advertisement -

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು.

ಅಮಾನತು ವಾಪಸ್ ಪಡೆಯುವ ವೇಳೆ, ಸದನದ ಒಳಗೆ ಅಥವಾ ಸಂಸತ್ತಿನ ಸಂಕೀರ್ಣದಲ್ಲಿ ಯಾವುದೇ ರೀತಿಯ ಫಲಕಗಳು, ಪೋಸ್ಟರ್‌ಗಳು, ಫೋಟೋಗಳು ಅಥವಾ ಕೃತಕ ಬುದ್ಧಿಮತ್ತೆಯಿಂದ ರಚಿತವಾದ ಚಿತ್ರಗಳನ್ನು ಪ್ರದರ್ಶಿಸಬಾರದು ಎಂದು ಸ್ಪೀಕರ್ ಒತ್ತಿ ಹೇಳಿದರು.

ಎಂಟು ವಿರೋಧ ಪಕ್ಷದ ಸಂಸದರ ಅಮಾನತು ಮರು ಪರಿಶೀಲಿಸುವಂತೆ ಕಾಂಗ್ರೆಸ್ ಸದಸ್ಯ ಕೆ. ಸುರೇಶ್ ಸದನಕ್ಕೆ ಮನವಿ ಮಾಡಿದ್ದರು. ಸದನದಲ್ಲಿ ಏನೇ ನಡೆದಿದ್ದರೂ ಅದು ವಿಷಾದನೀಯ. ಸದನದ ಸುಗಮ ಕಾರ್ಯನಿರ್ವಹಣೆಗೆ ತಮ್ಮ ಪಕ್ಷ ಸಹಕರಿಸಲು ಸಿದ್ಧವಾಗಿದೆ ಎಂದರು.

ಹಲವು ವಿಪಕ್ಷ ಸಂಸದ ಮನವಿಗಳ ಹಿನ್ನೆಲೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದನದ ಸುಗಮ ಕಾರ್ಯನಿರ್ವಹಣೆಗೆ ‘ಲಕ್ಷ್ಮಣ ರೇಖೆ’ಯನ್ನು ಎಳೆಯುವ ಅವಶ್ಯಕತೆಯಿದೆ ಎಂದು ಹೇಳಿದರು. ಇದನ್ನು ಆಡಳಿತ ಮತ್ತು ವಿರೋಧ ಪಕ್ಷಗಳು ಒಪ್ಪಿಕೊಂಡವು.

ಸದನದಲ್ಲಿ ಅಥವಾ ಸಂಸತ್ತಿನ ಸಂಕೀರ್ಣದ ಒಳಗೆ ಯಾವುದೇ ಫಲಕಗಳು, ಪೋಸ್ಟರ್‌ಗಳು, ಫೋಟೋಗಳು ಅಥವಾ ಕೃತಕ ಬುದ್ಧಿಮತ್ತೆ (ಎಐ) ರಚಿತ ಚಿತ್ರಗಳನ್ನು ಪ್ರದರ್ಶಿಸದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಸ್ಪೀಕರ್ ಬಿರ್ಲಾ ಹೇಳಿದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯಬೇಕು ಮತ್ತು ಎಲ್ಲರೂ ಸಹಕರಿಸಬೇಕು ಎಂಬುವುದು ಎಲ್ಲರ ಅಭಿಪ್ರಾಯವಾಗಿದೆ ಎಂದರು.

ನಂತರ ರಿಜಿಜು ಅವರು ಏಳು ಕಾಂಗ್ರೆಸ್ ಸಂಸದರು ಮತ್ತು ಒಬ್ಬರು ಸಿಪಿಐ-ಎಂ ಸಂಸದ ಅಮಾನತು ರದ್ದುಗೊಳಿಸುವ ನಿರ್ಣಯವನ್ನು ಮಂಡಿಸಿದರು, ಅದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಕಾಂಗ್ರೆಸ್‌ ಸಂಸದರಾದ ಹೈಬಿ ಈಡನ್, ಸಿ ಕಿರಣ್ ಕುಮಾರ್ ರೆಡ್ಡಿ, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಮಾಣಿಕ್ಕಂ ಟ್ಯಾಗೋರ್, ಪ್ರಶಾಂತ್ ಪಡೋಲೆ ಮತ್ತು ಡೀನ್ ಕುರಿಯಾಕೋಸ್ ಹಾಗೂ ಪಿಐ(ಎಂ) ಎಸ್‌. ವೆಂಕಟೇಶನ್ ಅಮಾನತುಗೊಂಡಿದ್ದರು.

ಸಂಸತ್ತಿನ ಬಜೆಟ್‌ ಅಧಿವೇಶನದ ಮೊದಲ ಹಂತದಲ್ಲಿ ಲೋಕಸಭೆ ಅಂಗೀಕರಿಸಿದ ನಿರ್ಣಯಗಳ ವಿರುದ್ದ ಪ್ರತಿಭಟಿಸುವಾಗ ಅಶಿಸ್ತು ತೋರಿದ್ದಾರೆ ಎಂಬ ಕಾರಣ ನೀಡಿ ಸಂಸದರನ್ನು ಅಮಾನತು ಮಾಡಲಾಗಿತ್ತು.

ಏಪ್ರಿಲ್ 12ರಂದು ಕೊನೆಗೊಳ್ಳುವ ಬಜೆಟ್ ಅಧಿವೇಶನ ಸಂಪೂರ್ಣ ಅವಧಿಗೆ ಸಂಸದರನ್ನು ಅಮಾನತುಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...