Homeಕರ್ನಾಟಕಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

- Advertisement -
- Advertisement -

ಲೋಕಸಭೆಯಲ್ಲಿ ಇಂದು ಸಂಭವಿಸಿದ ಭದ್ರತಾ ಲೋಪದ ಕುರಿತು ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಯುವಕರಿಗೆ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ’ ಎಂದಿದ್ದಾರೆ.

‘ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ’ ಎಂದಿದ್ದಾರೆ.

‘ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...