Homeಮುಖಪುಟಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಲೋಕಸಭೆ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿಯನ್ನು ದೆಹಲಿ ಪೊಲೀಸರು  ಬಂಧಿಸಿದ್ದು, ಪ್ರಕರಣದ ‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ್ ಕುಮಾವತ್ ಅವರನ್ನು ಇಂದು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಘಟನೆ ನಡೆದ ಮರುದಿನ ಶರಣಾಗಲು ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ಬಂದಿದ್ದ ಲಲಿತ್ ಝಾ ಅವರೊಂದಿಗೆ ಮಹೇಶ್ ಕುಮಾವತ್ ಕೂಡ ಆಗಮಿಸಿದ್ದರು. ಇಬ್ಬರನ್ನೂ ತನಿಖಾಧಿಕಾರಿಗಳ ವಶಕ್ಕೆ ನೀಡಲಾಗಿದ್ದು, ಅಂದಿನಿಂದಲೆ ಮಹೇಶ್ ಅವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದ ಆರೋಪಿಗಳು ಈ ಹಿಂದೆ ನಿರ್ವಹಣೆ ಮಾಡುತ್ತಿದ್ದ ಭಗತ್ ಸಿಂಗ್ ಫ್ಯಾನ್ ಕ್ಲಬ್ ಪೇಜ್ ನ ಸದಸ್ಯನಾಗಿದ್ದು, ಸಾಕ್ಷ್ಯ ನಾಶ, ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಕುಮಾವತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಆರೋಪಿಗಳ ಮೊಬೈಲ್ ಫೋನ್ ನಲ್ಲಿದ್ದ ಸಾಕ್ಷ್ಯ ನಾಶಪಡಿಸುವ ಕೆಲಸದಲ್ಲಿ ಕುಮಾವತ್ ಭಾಗಿಯಾಗಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಸಿದ ನಂತರ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿಯು ದೇಶದಲ್ಲಿ ಅರಾಜಕತೆಯನ್ನು ಹರಡುವ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಪ್ರಾಸಿಕ್ಯೂಟರ್, ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ವಾದ ಮಂಡಿಸಿದರು.

ಪೊಲೀಸರು ಈಗಾಗಲೇ ಪ್ರಕರಣದ ಮಾಸ್ಟರ್ ಮೈಡ್ ಲಲಿತ್ ಝಾ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈತನೆ ಭದ್ರತೆ ಉಲ್ಲಂಘನೆಯ ಕೃತ್ಯದ ಹಿಂದಿನ ‘ಮಾಸ್ಟರ್ ಮೈಂಡ್’ ಎನ್ನುವುದಕ್ಕೆ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗುರುವಾರ ರಾತ್ರಿಯೇ ಝಾ ಅವರನ್ನು ಬಂಧಿಸಿದ ನಂತರ ಶುಕ್ರವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸುವ ಸಂಚು ರೂಪಿಸಲು ಆರೋಪಿಗಳು ಹಲವು ಬಾರಿ ಭೇಟಿಯಾಗಿದ್ದರು ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ.

ಅಲ್ಲದೆ, ಆರೋಪಿಯು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ; ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...