Homeಮುಖಪುಟಲೋಕಸಭೆ ಭದ್ರತಾ ಲೋಪ: 'ಶೂ' ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

- Advertisement -
- Advertisement -

ಸಂಸತ್ ಭವನದ ಬಿಗಿ ಭದ್ರತೆ ದಾಟಿ ಲೋಕಸಭೆಯೊಳಗೆ ಪ್ರವೇಶಿಸಿ, ‘ಕಲರ್ ಸ್ಮೋಕ್’ ದಾಳಿ ನಡೆಸಿದ್ದವರಲ್ಲಿ ಒಬ್ಬನಾಗಿರುವ ಮೈಸೂರು ನಿವಾಸಿ ಮನೋರಂಜನ್, ಸಂಸತ್ತಿನಲ್ಲಿ ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಂದ ಪ್ರವೇಶ ಪಾಸ್ ಪಡೆದು ಬುಧವಾರ ಲೋಕಸಭೆ ಪ್ರವೇಶಿಸಿದ ಕರ್ನಾಟಕದ ಮನೋರಂಜನ್, ಸಂಸತ್ತಿನ ಪ್ರವೇಶದ ಸಮಯದಲ್ಲಿ ಶೂಗಳನ್ನು ಪರಿಶೀಲಿಸುವುದಿಲ್ಲ ಎಂಬುದನ್ನು ಕಳೆದ ಜುಲೈನಲ್ಲೆ ಕಂಡುಕೊಂಡಿದ್ದ. ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮನೋರಂಜನ್ ‘ಕಂಡದ್ದು’ ಭದ್ರತಾ ಉಲ್ಲಂಘನೆಗೆ ಉಪಯುಕ್ತವಾಯಿತು. ‘ಜುಲೈನಲ್ಲಿ ದೆಹಲಿಗೆ ಬಂದಿದ್ದ ಮನೋರಂಜನ್, ಸಂಸದರ ಹೆಸರಿನಲ್ಲಿ ನೀಡಲಾದ ವಿಸಿಟರ್ ಪಾಸ್‌ನಲ್ಲಿ ಸಂಸತ್ ಪ್ರವೇಶಿಸಿದ್ದ ಎನ್ನಲಾಗಿದೆ. ಪರಿಶೀಲನೆ ವೇಳೆ ಬೂಟುಗಳನ್ನು ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮನೋರಂಜನ್ ತಿಳಿದುಕೊಂಡಿದ್ದ.

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಐದು ಜನ ಪ್ರಮುಖ ಆರೋಪಿಗಳಾಗಿದ್ದಾರೆ.

ತಮ್ಮ ಯೋಜನೆಯಂತೆ, ಸಂಸತ್ ಪ್ರವೇಶಿಸುವ ಸಲುವಾಗಿ ಇವರೆಲ್ಲರೂ ಡಿಸೆಂಬರ್ 10 ರಂದು ದೆಹಲಿಯನ್ನು ತಲುಪಿದ್ದರು. ಅವರಿಗೆ ಗುರುಗ್ರಾಮದ ವಿಶಾಲ್ ಶರ್ಮಾ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಘಟನೆ ನಂತರ ಮನೋರಂಜನ್, ಸಾಗರ್, ನೀಲಂ ಮತ್ತು ಅನ್ಮೋಲ್ ಅವರನ್ನು ನಿನ್ನೆಯೇ ಬಂಧಿಸಲಾಗಿದ್ದು, ಅವರ ವಿರುದ್ಧ ಯುಎಪಿಎ ಆರೋಪವನ್ನು ಹೊರಿಸಲಾಗಿದೆ. ಇಂದು ವಿಶಾಲ್ ಶರ್ಮಾನನ್ನೂ ಕೂಡ ಬಂಧಿಸಲಾಗಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಲಲಿತ್, ಸಾಗರ್ ಶರ್ಮಾ ಮತ್ತು ಮನೋರಂಜನ್ ಮೈಸೂರಿನಲ್ಲಿ ಭೇಟಿಯಾಗಿದ್ದರು. ಅಲ್ಲಿ ಅವರು ಸಂಸತ್ತಿಗೆ ನುಗ್ಗುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ನಂತರ ಅವರು ನೀಲಂ ಮತ್ತು ಅಮೋಲ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದರು.

ಘಟನೆ ನಂತರ ಲಲಿತ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ನಂತರ ಅದನ್ನು ಪಶ್ಚಿಮ ಬಂಗಾಳದ ವಿಶಾಲ್ ಶರ್ಮಾ ಮತ್ತು ನೀಲಾಕ್ಷ ಐಚ್ ಅವರಿಗೆ ಕಳುಹಿಸಿದ್ದಾರೆ. ಇಲ್ಲಿಯವರೆಗಿನ ತನಿಖೆಯಲ್ಲಿ ಯಾವುದೇ ಭಯೋತ್ಪಾದಕ ಸಂಘಟನೆಯ ಸಂಪರ್ಕ ಬಂಧಿತರಿಗೆ ಇರುವುದು ಪತ್ತೆಯಾಗಿಲ್ಲ. ಮನೋರಂಜನ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ ಎಂದು ಮೈಸೂರು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಗಮನಿಸಿದರೆ ಆತ ‘ಕ್ರಾಂತಿಕಾರಿ’ಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

ಇನ್ನು ಅಮೋಲ್ ಡಿ. 9 ರಂದು ಸೇನಾ ನೇಮಕಾತಿಗಾಗಿ ದೆಹಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ಈತ ಮಹಾರಾಷ್ಟ್ರದ ಕಲ್ಯಾಣ್‌ನಿಂದ ಸುಮಾರು ₹1,200 ಬೆಲೆಗೆ ಬಣ್ಣದ ಹೊಗೆ ಡಬ್ಬಿಗಳನ್ನು (ಸ್ಮೋಕ್ ಬಾಂಬ್) ಖರೀದಿಸಿದ್ದ ಎಂದು ತಿಳಿದುಬಂದಿದೆ.

ಆಶ್ರಯ ನೀಡಿದ್ದ ವಿಶಾಲ್ ಶರ್ಮಾ ಬಂಧನ:

ಲೋಕಸಭೆಯ ಭದ್ರತಾ ಲೋಪದ 5ನೇ ಶಂಕಿತ ಆರೋಪಿ ವಿಶಾಲ್ ಶರ್ಮಾ ಎಂಬಾತನನ್ನು ತನಿಖಾ ತಂಡ ಗುರುಗ್ರಾಮದಲ್ಲಿ ವಶಕ್ಕೆ ಪಡೆದಿದೆ. ಈತ ಯೋಜನೆ ರೂಪಿಸಿದ ನಾಲ್ವರಿಗೆ ಆಶ್ರಯ ನೀಡಿದ್ದಾನೆ ಎನ್ನಲಾಗಿದೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಅಧಿವೇಶನದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಧುಮುಕಿ ಹಳದಿ ಬಣ್ಣದ ಹೊಗೆಯನ್ನು (ಸ್ಮೂಕ್ ಬಾಂಬ್) ಸ್ಪೋಟಿಸಿದರು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಕೂಡ ಹಳದಿ ಹೊಗೆ ಸ್ಪೋಟಿಸಿ ಘೋಷಣೆ ಕೂಗಿದರು. ಬಂಧಿತ ಐವರೂ ಕೂಡ ವಿಭಿನ್ನ ಹಿನ್ನೆಲೆಯವರಾಗಿದ್ದು, ಎಲ್ಲರೂ ನಿರುದ್ಯೋಗಿ ಯುವಕರು.

ಆರು ಆರೋಪಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದರೂ ಒಬ್ಬರಿಗೊಬ್ಬರು ಮೊದಲೇ ಪರಿಚಿತರಾಗಿದ್ದರು. ಬುಧವಾರ ಸಂಸತ್ತಿನಲ್ಲಿ ಅವರು ಏನು ಮಾಡುತ್ತಿದ್ದಾರೆಂಬುದು ಅವರ ಕುಟುಂಬದ ಸದಸ್ಯರಿಗೆ ತಿಳಿದಿರಲಿಲ್ಲ. ಬಂಧಿತರೆಲ್ಲರೂ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ತನಿಖೆ ವೇಳೆ ಅಮೋಲ್ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಂಧಿತರು ಯಾವುದಾದರೂ ಸಂಘ-ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ; ಕಲಾಪಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್-ಡಿಎಂಕೆ ಪಕ್ಷದ 14 ಸಂಸದರು ಲೋಕಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...