Homeಕರ್ನಾಟಕಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

- Advertisement -
- Advertisement -

ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಇಂದು ಬೆಳಗ್ಗೆ ತುರ್ತು ವಿಚಾರಣೆಗಾಗಿ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಸಿಜೆಐ ಡಿವೈ ಚಂದ್ರಚೂಡ್ ಶುಕ್ರವಾರ ವಿಷಯವನ್ನು ಪಟ್ಟಿ ಮಾಡಲು ಒಪ್ಪಿದಾಗ, ಸಾಧ್ಯವಾದರೆ ಇಂದೇ ವಿಚಾರಣೆ ನಡೆಸುವಂತೆ ಲೋಕಾಯುಕ್ತ ಪರ ವಕೀಲರು ಕೋರಿದರು. ಆದರೆ, ಸಾಂವಿಧಾನಿಕ ಪೀಠದ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸುತ್ತಿರುವುದರಿಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಲು ಸಿಜೆಐ ಸೂಚಿಸಿದರು.

ತಕ್ಷಣ ನ್ಯಾಯಮೂರ್ತಿ ಕೌಲ್ ನೇತೃತ್ವದ ಪೀಠಕ್ಕೆ ಧಾವಿಸಿದ ಲೋಕಾಯುಕ್ತ ಪರ ವಕೀಲರು, ತುರ್ತು ವಿಚಾರಣಾ ಪಟ್ಟಿಗೆ ಸೇರಿಸಲು ಮನವಿ ಮಾಡಿದರು. ಆಗ ನ್ಯಾಯಮೂರ್ತಿ ಕೌಲ್ ಅವರು, ಅರ್ಜಿಯ ಶೀಘ್ರ ಇತ್ಯರ್ಥದ ಅಗತ್ಯ ಏನು ಎಂದು ವಕೀಲರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಲೋಕಾಯುಕ್ತ ಪರ ವಕೀಲರು, ಆರೋಪಿಯು ಹಾಲಿ ಶಾಸಕರಾಗಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು. ಆಗ ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೌಲ್, ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಆದೇಶಿಸಿದರು.

ಮಧ್ಯಾಹ್ನ 2ಗಂಟೆಗೆ ವಿಚಾರಣೆ ನಡೆಸುವಂತೆ ವಕೀಲರು ಮರು ಮನವಿ ಮಾಡಿದಾಗ, ಇದು ಜಾಮೀನು ರದ್ದು ಅರ್ಜಿಯಾಗಿರುವುದರಿಂದ ಬಿಡುವಿನ ಸಮಯದಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಏನಿದು ಪ್ರಕರಣ?

ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳ್ ಅವರು ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ ಪ್ರಕ್ರಿಯೆಯಲ್ಲಿ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಮಗನ ಮೂಲಕ ಮಾಡಾಳ್ ವಿರುಪಾಕ್ಷಪ್ಪ ಭ್ರಷ್ಟಾಚಾರ ನಡೆಸುತ್ತಿದ್ದನು ಎನ್ನುವ ಆರೋಪ ಕೇಳಿಬಂದಿದೆ.

ಇದಾದ ಬಳಿಕ ನಡೆದಿದ್ದ ದಾಳಿಯಲ್ಲಿ ಕೆಎಸ್‌ಡಿಎಲ್ ಕಚೇರಿಯಲ್ಲಿ ಸುಮಾರು 2 ಕೋಟಿ ರೂ. ಹಾಗೂ ಪ್ರಶಾಂತ್ ಮನೆಯಿಂದ 6 ಕೋಟಿ ರೂ. ಹೀಗೆ ಒಟ್ಟು 8.23 ​​ಕೋಟಿ ರೂಪಾಯಿ ನಗದು, ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಜಮೀನುಗಳಲ್ಲಿ ಹಣ ಹೂಡಿಕೆ ಮಾಡಿದ್ದ ದಾಖಲೆಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿದ್ದವು.

ಹಾಗಾಗಿ ಅವರ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಮಾರ್ಚ್ 2ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ದಾಖಲಿಸಿರುವ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಪ್ರಶಾಂತ್ ಮಾಡಾಳ್ ಎರಡನೇ ಆರೋಪಿ. ಪ್ರಶಾಂತ್ ಮಾಡಾಳ್ ಬಂಧನವಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಶಾಸಕ ಕೆ ಮಾಡಾಳ್‌ ವಿರೂಪಾಕ್ಷಪ್ಪಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು​ ಜಾರಿಗೊಳಿಸಿದೆ. 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಇದನ್ನು ನೀಡಲಾಗಿದ್ದು, ಆದೇಶ ತಲುಪಿದ 48 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್​ ಸೂಚಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...