Homeಕರ್ನಾಟಕರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

- Advertisement -
- Advertisement -

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಒಟ್ಟು 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ.

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ವಿದ್ಯುತ್ ಇಲಾಖೆ (ಕೆಪಿಟಿಸಿಎಲ್/ ಬೆಸ್ಕಾಂ), ಜಲಮಂಡಳಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿರುವವರ ಮನೆ ಹಾಗೂ ಕಚೇರಿಗಳ ಶೋಧ ಕಾರ್ಯ ಕೈಗೊಳ್ಳಲಾಗಿದೆ.

ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರ ಮತ್ತು ನಗದನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಹಾಸನ ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇಇ) ಸತ್ಯನಾರಾಯಣ ಅವರ ಮನೆ, ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಇಇ ಸತೀಶ್ ಅವರ ಮನೆ ಮತ್ತು ಕಚೇರಿ, ಬಾಗಲಕೋಟೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಮುಖ್ಯ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆ, ಮೈಸೂರಿನಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಆಸಿಫ್ ಇಕ್ಬಾಲ್ ಅವರ ಮನೆ ಮತ್ತು ಕಚೇರಿ, ಯಾದಗಿರಿಯಲ್ಲಿ ವಿದ್ಯುತ್ ಇಲಾಖೆಯ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರ್ ವಿರೇಶ್ ಹಿರೇಮಠ್, ಧಾರವಾಡದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ. ಕೆ. ಸುರಕೋಡ್ ಅವರ ಮನೆ ಮೇಲೆ ದಾಳಿ ನಡೆದಿದೆ ಎಂದು ವರದಿಗಳು ವಿವರಿಸಿವೆ.

ಹಾಸನದಲ್ಲಿ ಎಎಇ ಸತ್ಯನಾರಾಯಣ ಅವರು ಬಾಗಿಲು ತೆರೆಯಲು ನಿರಾಕರಿಸಿದಾಗ, ಲೋಕಾಯುಕ್ತ ಪೊಲೀಸರು ಜೀಪ್ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ.

ಬಾಗಲಕೋಟೆಯಲ್ಲಿ ಕೆಆರ್‌ಡಿಸಿಎಲ್‌ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆಯಲ್ಲಿ ಶೋಧ ನಡೆಸುತ್ತಿದ್ದಾಗ ಕೆರೆ ಹಾವೊಂದು ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಅಧಿಕಾರಿಗಳು ಅಕ್ರಮವಾಗಿ ಗಳಿಸಿರುವ ಆಸ್ತಿ ಪತ್ರಗಳು, ಚಿನ್ನಾಭರಣ ಮತ್ತು ನಗದನ್ನು ಲೋಕಾಯುಕ್ತ ತಂಡ ವಶಪಡಿಸಿಕೊಳ್ಳುತ್ತಿದೆ. ಸದ್ಯಕ್ಕೆ ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...