Homeಕರ್ನಾಟಕಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು ಮತದಾನ

ಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು ಮತದಾನ

- Advertisement -
- Advertisement -

ಲೋಕಸಭಾ ಚುನಾವಣೆಯ ಹಿನ್ನೆಲೆ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ  ಮತದಾನ ನಡೆಯುತ್ತಿದೆ. ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‍ಗಾಂಧಿ, ತಿರುವನಂತಪುರಂನಲ್ಲಿ  ಶಶಿತರೂರ್‌ ಸೇರಿದಂತೆ 88 ಕೇತ್ರಗಳಲ್ಲಿ 1200 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕೇರಳದ ಎಲ್ಲ 20 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ಆರಂಭವಾಗಿದ್ದು, ಮತಗಟ್ಟೆಗಳ ಹೊರಗೆ ದೊಡ್ಡ ಸರತಿ ಸಾಲುಗಳು ಬೆಳಿಗ್ಗೆಯಿಂದಲೇ ಕಾಣಿಸುತ್ತಿವೆ. ಪಶ್ಚಿಮ ಬಂಗಾಳದ ಬಲೂರ್ ಘಾಟ್‍ನಲ್ಲಿ ಕೂಡಾ ಮತದಾನ ಆರಂಭವಾಗಿದೆ. ರಾಜ್ಯದ 42 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಹನ್ನೆರಡು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಗೆ 2,633 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 1,428 ಸಿಂಧುವಾಗಿತ್ತು.

ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆ 7ರಿಂದಲೇ ಜನರು ಮತಗಟ್ಟೆಗಳ ಬಳಿ ಸಾಗಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53ರಲ್ಲಿ ಮತದಾನ ಸ್ಥಗಿತಗೊಂಡಿದ್ದು, ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತಿದ್ದಾರೆ. ಮತದಾನ ವೇಳೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿರ್ಬಂಧ ಹೇರಲಾಗಿದೆ. ಮತದಾನದ ವಿಡಿಯೋ ಮಾಡಿಕೊಳ್ಳುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಹೊರಗೆ ಮೊಬೈಲ್​​ ಇಟ್ಟು ಹೋಗಲು ಸೂಚನೆ ನೀಡಲಾಗುತ್ತಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಅಸ್ಸಾಂನ 5, ಬಿಹಾರದ 5, ಛತ್ತೀಸ್‌ಗಢದ 3, ಕರ್ನಾಟಕದ 14, ಕೇರಳದ 20, ಮಧ್ಯಪ್ರದೇಶದ 7, ಮಹಾರಾಷ್ಟ್ರದ 8, ಮಣಿಪುರದ 1, ರಾಜಸ್ಥಾನದ 13, ತ್ರಿಪುರಾದ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಇದನ್ನು ಓದಿ: ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...