Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ದೇಶದ ಜನತೆಗೆ ಪಂಚ ಗ್ಯಾರೆಂಟಿಯನ್ನು ಘೋಷಿಸಿದ್ದು, ಅದರಡಿಯಲ್ಲಿ ಒಟ್ಟು 15 ಭರವಸೆಗಳನ್ನು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಗ್ಯಾರೆಂಟಿ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ. ಈ ಪಂಚ ಗ್ಯಾರೆಂಟಿಗಳು ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ನಿದ್ದೆಗೆಡಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ‘ಶ್ರಮಿಕ ನ್ಯಾಯ’ ‘ಹಿಸ್ಸೇದಾರಿ‘(ಭಾಗೀದಾರರ)ನ್ಯಾಯ ಗ್ಯಾರೆಂಟಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಈಗಾಗಲೇ ಕಿಸಾನ್ ನ್ಯಾಯ, ಯುವ ನ್ಯಾಯ ಹಾಗೂ ನಾರಿ ನ್ಯಾಯ ಗ್ಯಾರಂಟಿಗಳನ್ನು ಘೋಷಿಸಿದೆ. ಈ ಮೂರು ಗ್ಯಾರೆಂಟಿಗಳು ತಲಾ 5 ಅಂಶಗಳಂತೆ 15 ಗ್ಯಾರೆಂಟಿಗಳನ್ನು ಹೊಂದಿದೆ. ಈಗ ನಾಲ್ಕು ಮತ್ತು ಐದನೇ ಗ್ಯಾರಂಟಿಗಳಾಗಿ ಶ್ರಮಿಕ ನ್ಯಾಯ ಹಾಗೂ ಹಿಸ್ಸೇದಾರಿ ನ್ಯಾಯ ಗ್ಯಾರಂಟಿ ಘೋಷಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಶ್ರಮಿಕ ನ್ಯಾಯದಡಿಯಲ್ಲಿನ 5 ಭರವಸೆಗಳು

-ನರೇಗಾ ಯೋಜನೆ ಅಡಿಯಲ್ಲಿ ದಿನಗೂಲಿ ಮೊತ್ತ 400ಕ್ಕೆ ಏರಿಕೆ

-ಕಾರ್ಮಿಕರಿಗೆ ಆರೋಗ್ಯ ಹಕ್ಕು ಜಾರಿಗೆ ತಂದು ಉಚಿತ ಔಷಧಿ, ಚಿಕಿತ್ಸೆ, ರೋಗಪತ್ತೆ, ಶಸ್ತ್ರಚಿಕಿತ್ಸೆ ಸೌಲಭ್ಯ

-ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದು, ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ ಹಾಗೂ ನಗರಗಳಲ್ಲಿ ಹವಾಮಾನ ವೈಪರೀತ್ಯ ನಿಯಂತ್ರಣ, ಸಾಮಾಜಿಕ ಸೇವೆಗಳ ಅಂತರ ಕಡಿಮೆ ಮಾಡುವುದು.

-ಅಸಂಘಟಿತ ವಲಯದ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ

– ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆದು ಕಾರ್ಮಿಕರ ಹಕ್ಕುಗಳ ಮರುಸ್ಥಾಪನೆ

ಹಿಸ್ಸೇದಾರಿ ನ್ಯಾಯದಡಿಯಲ್ಲಿನ 5 ಭರವಸೆಗಳು

-ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ನಡೆಸಿ ದೇಶದ ಸಂಪತ್ತಿನ ಸಮಾನ ಹಂಚಿಕೆ ಮಾಡುವುದು, ಆಡಳಿತದಲ್ಲಿ ಎಲ್ಲ ವರ್ಗದವರ ಪ್ರಾತಿನಿಧ್ಯಕ್ಕೆ ಅವಕಾಶ ನೀಡುವುದು

-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಡ್ಡಿಯಾಗಿರುವ ಶೇ‌ 50 ಮಿಸಲಾತಿ ಮಿತಿಯನ್ನು ತಿದ್ದುಪಡಿ ಮೂಲಕ ಏರಿಕೆ

-ಆದಿವಾಸಿಗಳಿಗೆ ಅರಣ್ಯ ಹಕ್ಕು ರಕ್ಷಣೆ, ಬಾಕಿ ಇರುವ ಅರಣ್ಯ ಹಕ್ಕು ಕಾಯ್ದೆಯ ಬೇಡಿಕೆ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.

-ಅರಣ್ಯದ ಕಿರು ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವಿಸ್ತರಣೆ. ಅರಣ್ಯ ಸಂರಕ್ಷಣೆ ಕಾಯ್ದೆ ಹೆಸರಿನಲ್ಲಿ ಮಾಡಲಾಗಿರುವ ಬುಡಕಟ್ಟು ವಿರೋಧಿ ತಿದ್ದುಪಡಿಗಳ ರದ್ಧತಿ

-ಆದಿವಾಸಿಗಳಿಗೆ ಸ್ವಯಂ ಆಡಳಿತ ಹಾಗೂ ಸಂಸ್ಕೃತಿ ರಕ್ಷಣೆ ಹಕ್ಕು, ಮಧ್ಯಪ್ರದೇಶ ಛತ್ತೀಸ್ ಗಡ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಜನ ಅರಣ್ಯ ಪ್ರದೇಶಗಳಿಂದ ವಲಸೆ ಹೋಗುತ್ತಿದ್ದು, ಇವರಿಗಾಗಿ ಜಲ, ಅರಣ್ಯ ಹಾಗೂ ಭೂಮಿಯನ್ನು ನಾವು ರಕ್ಷಣೆ ಮಾಡುತ್ತೇವೆ. ದೊಡ್ಡ ಉದ್ಯಮಿಗಳು ಅರಣ್ಯ ಪ್ರದೇಶಕ್ಕೆ ಕಾಲಿಡುತ್ತಿದ್ದು, ಅವರಿಂದ ಅರಣ್ಯ ರಕ್ಷಣೆ ಮಾಡಲಾಗುವುದು. ಸರಕಾರದಲ್ಲಿರುವ ಮೀಸಲಾತಿ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹೊಸ ಗ್ಯಾರೆಂಟಿಯಲ್ಲಿ ಉಲ್ಲೇಖಿಸಲಾಗಿದೆ.

ಮೋದಿಯ  10 ವರ್ಷಗಳ ಆಡಳಿತದಲ್ಲಿ ಕಾರ್ಮಿಕರ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಮೋದಿ ಸರಕಾರ ನರೇಗಾ ಯೋಜನೆ ಕಾರ್ಮಿಕರ ವೇತನದ ಹಣವನ್ನು ರಾಜ್ಯಗಳಿಗೆ ಈವರೆಗೂ ನೀಡಿಲ್ಲ. ಈ ವಿಚಾರವಾಗಿ ನಮ್ಮ ಸಿಎಂ ಹಾಗೂ ಸಚಿವರುಗಳು ಎಷ್ಟೇ ಮನವಿ ನೀಡಿ ಗೋಗರೆದರೂ ಮೋದಿ ಸರಕಾರ ಸಹಕಾರ ನೀಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ನಮ್ಮ ಸರಕಾರ ಜಾರಿಗೊಳಿಸಲಿದೆ. ನಾವು ಕೊಟ್ಟಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಅದಕ್ಕೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳೇ ಸಾಕ್ಷಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಮೊದಲು ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ನವದೆಹಲಿಯಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದರು. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಮಾಡುವುದಾಗಿ ಹೇಳಿದ್ದರು.

‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿನ ಭರವಸೆಗಳು

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಯುವ ನ್ಯಾಯದಡಿ ಭರವಸೆಗಳು

-ಶಿಕ್ಷಣ ಪಡೆದ ಪದವಿಧರರು, ಡಿಪ್ಲೋಮಾ ಹೊಂದಿದವರಿಗೆ ಒಂದು ವರ್ಷ ತರಬೇತಿ ಕೊಟ್ಟು, ಒಂದು ಲಕ್ಷ ರೂ.ಗಳ  ಶಿಷ್ಯವೇತನ

-30 ಲಕ್ಷ ಖಾಲಿ ಹುದ್ದೆಗಳ ಭರ್ತಿ

-ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾನೂನು

-ಗಿಗ್ ಕೆಲಸಗಾರರಿಗೆ ಸಾಮಾಜಿಕ ಭದ್ರತೆ ಖಾತರಿ

-ಸ್ಟಾರ್ಟ್​ ಅಪ್​​ ಉದ್ಯಮಿಗಳಿಗೆ ಸಹಾಯ ಮಾಡಲು  5,000 ಕೋಟಿ ರೂ. ಸ್ಟಾರ್ಟಪ್ ಕಾರ್ಪಸ್

ರೈತ ನ್ಯಾಯದಡಿ ಭರವಸೆಗಳು

-ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.

-ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.

-ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.

-ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.

-ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....