ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ.
ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ.
ರಾಜ್ಯದ ಮೈಸೂರಿನಲ್ಲಿ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ, ಅದರಲ್ಲಿ ಬಿಜೆಪಿ ಅಭ್ಯರ್ಥಿ ಯದ್‌ವೀರ್ ಮುನ್ನಡೆಯನ್ನು ಸಾಧಿಸಿದ್ದಾರೆ, ತುಮಕೂರಿನಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಸೋಮಣ್ಣ ಮುನ್ನಡೆಯನ್ನು ಸಾಧಿಸಿದ್ದಾರೆ.
ಲೋಕಸಭಾ ಚುನಾವಣೆಯಇವಿಎಂ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಮೋದಿ ನೇತೃತ್ವದ ಎನ್‌ಡಿಎ ‘ಹ್ಯಾಟ್ರಿಕ್‘ ಗೆಲುವಿನ ವಿಶ್ವಾಸದಲ್ಲಿದ್ದರೆ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದೆ.
2024ರ ಸಾರ್ವತ್ರಿಕ ಚುನಾವಣೆ ಏಪ್ರಿಲ್ 19ರಿಂದ ಜೂನ್ 1ರ ವರೆಗೆ 7ಹಂತಗಳಲ್ಲಿ ನಡೆದಿದೆ. ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ.
ಇದನ್ನು ಓದಿ: ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಅತ್ಯಾಚಾರ ಆರೋಪಿ: ರಾಜಸ್ಥಾನದ 8 ಪೊಲೀಸರ ವಿರುದ್ಧ ಕೊಲೆ ಪ್ರಕರಣ


