Homeಮುಖಪುಟಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅಂಗೀಕಾರ

ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅಂಗೀಕಾರ

- Advertisement -
- Advertisement -

ಮಣಿಪುರದ ವಿಚಾರಕ್ಕೆ ಸಂಬಂಧಿಸಿ ಪ್ರತಿಪಕ್ಷಗಳ ಘೋಷಣೆಯ ಮಧ್ಯೆಯೇ ಲೋಕಸಭೆಯಲ್ಲಿ ಸೋಮವಾರ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ 2023ನ್ನು ಧ್ವನಿ ಮತಗಳ ಮೂಲಕ ಅಂಗೀಕರಿಸಲಾಗಿದೆ.

ಈ ಮಸೂದೆಯು ಭಾರತೀಯ ನಾಗರಿಕರ ಗೌಪ್ಯತೆಯನ್ನು ರಕ್ಷಿಸಲು ಪ್ರಯತ್ನಿಸುತ್ತದೆ ಮತ್ತು ನಿಯಮಾವಳಿಗಳನ್ನು ಉಲ್ಲಂಘಿಸುವ ಘಟಕಗಳಿಗೆ ಕನಿಷ್ಠ 50 ಕೋಟಿಯಿಂದ,  ಗರಿಷ್ಠ 250 ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಡೇಟಾ ಉಲ್ಲಂಘನೆಗೆ ಭಾರೀ ದಂಡವನ್ನು ವಿಧಿಸುವ ಹೊಸ ಡಿಜಿಟಲ್ ಹಕ್ಕುಗಳ ಕಾನೂನಿಗೆ ಲೋಕಸಭೆ ಇಂದು ಅನುಮೋದನೆ ನೀಡಿದೆ.ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆಯೇ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಮಸೂದೆಯನ್ನು ಸಂಸತ್ತಿನ ಸ್ಥಾಯಿ ಸಮಿತಿ ಪರಿಶೀಲನೆಗೆ ಕಳುಹಿಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಗಳ ಮಧ್ಯೆಯೇ ಕಳೆದ ಗುರುವಾರ ಕೆಳಮನೆಯಲ್ಲಿ ಮಂಡಿಸಲಾಯಿತು.ಮಸೂದೆಯನ್ನು  ಮಂಡಿಸಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್, ವಿರೋಧ ಪಕ್ಷದ ಸದಸ್ಯರಿಗೆ ಸಾರ್ವಜನಿಕ ಕಲ್ಯಾಣ ಮತ್ತು ಜನರ ವೈಯಕ್ತಿಕ ಡೇಟಾದ ರಕ್ಷಣೆಯಂತಹ ವಿಷಯಗಳ ಬಗ್ಗೆ ಸ್ವಲ್ಪ ಕಾಳಜಿ ಇಲ್ಲ ಮತ್ತು ಆದ್ದರಿಂದ ಅವರು ಘೋಷಣೆಗಳನ್ನು ಹಾಕುತ್ತಿದ್ದಾರೆ ಎಂದು ಹೇಳಿದರು.

ಇದನ್ನು ಓದಿ:ಉತ್ತರ ಪ್ರದೇಶ: ಜೈಲು ಶಿಕ್ಷೆಗೆ ಗುರಿಯಾದ ಬಿಜೆಪಿ ಸಂಸದ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...