Homeಮುಖಪುಟಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

- Advertisement -
- Advertisement -

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಒಟ್ಟಾಗಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ  ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ವೇಳೆ ಚುನಾವಣೆ ನಡೆಯಲಿದೆ.

ಲೋಕಸಭೆ ಚುನಾವಣೆ: 543 ಕ್ಷೇತ್ರಗಳ ಚುನಾವಣೆ, 84 ಎಸ್ಸಿ ಮೀಸಲಾತಿ ಕ್ಷೇತ್ರಗಳಿದೆ. 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತ:

ಏಪ್ರೀಲ್‌19ರಂದು ಮೊದಲ ಹಂತದ ಚುನಾವಣೆ

ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಢ, ಜಮ್ಮು-ಕಾಶ್ಮೀರ,

ಫಲಿತಾಂಶ:4

ಎರಡನೇ ಹಂತ:

ಮತದಾನ ಏಪ್ರೀಲ್‌:26

ಮತಎಣಿಕೆ: ಜೂನ್‌-  4

ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ

ಮೂರನೇ ಹಂತ:

ಮತದಾನ: ಮೇ-7

ಮತ ಎಣಿಕೆ: ಜೂನ್‌-4

4ನೇ ಹಂತ:

ಮತದಾನ: ಮೇ -13

ಮತ ಎಣಿಕೆ: ಜೂನ್‌- 4

5ನೇ ಹಂತ;

ಮತದಾನ: ಮೇ-20

6ನೇ ಹಂತ

ಮತದಾನ: ಮೇ-25

7ನೇ ಹಂತ

ಮತದಾನ: ಜೂನ್-1

ಮತ ಎಣಿಕೆ: ಜೂನ್‌-4

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ರಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ.  85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ  ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.

ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು,  40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ,  ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...