ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 245 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 148 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 11 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಇಂಡಿಯಾ ಮೈತ್ರಿಕೂಟ ಪ್ರಬಲ ಪ್ರತಿಸ್ಪರ್ಧೆಯನ್ನು ನೀಡುತ್ತಿದೆ. ತಲಾ 11 ಕ್ಷೇತ್ರಗಳಲ್ಲಿ ಸಮುಬಲದ ಮುನ್ನಡೆಯನ್ನು ಸಾಧಿಸಿದೆ. ಕರ್ನಾಟಕದಲ್ಲಿ ಎನ್‌ಡಿಎ 8 ಮತ್ತು ಇಂಡಿಯಾ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪ.ಬಂಗಾಳದಲ್ಲಿ ಬಿಜೆಪಿ 14 ಕ್ಷೇತ್ರಗಳಲ್ಲಿ, ಟಿಎಂಸಿ 11 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಇಂಡಿಯಾ ಮೈತ್ರಿಕೂಟ 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದೆ.
ಅಸ್ಸಾಂನಲ್ಲಿ ಎನ್‌ಡಿಎ 7 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಕೇರಳ ಎನ್‌ಡಿಎ 1, ಯುಡಿಎಫ್-15 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಝಾರ್ಕಾಂಡ್‌ನಲ್ಲಿ ಎನ್‌ಡಿಎ 1ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.
ವಾರಣಾಸಿಯಲ್ಲಿ ಪ್ರಧಾನಿ ಮೋದಿ ಮುನ್ನಡೆಯನ್ನು ಸಾಧಿಸಿದ್ದು, ರಾಹುಲ್ ಗಾಂಧಿ ರಾಯ್ ಬರೇಲಿ ಸೇರಿ ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿತರೂರ್ ತಿರುವನಂತಪುರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಣೋಜ್‌ನಲ್ಲಿ ಅಖಿಲೇಶ್ ಯಾದವ್ ಮುನ್ನಡೆಯನ್ನು ಸಾಧಿಸಿದ್ದಾರೆ. ಲಕ್ನೋನಲ್ಲಿ ರಾಜನಾಥ್ ಸಿಂಗ್ ಮುನ್ನಡೆಯನ್ನು ಸಾಧಿಸಿದ್ದಾರೆ. ಪುರಿಯಲ್ಲಿ ಸಂಬಿತ್ ಪಾತ್ರ ಮುನ್ನಡೆಯನ್ನು ಸಾಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಮುನ್ನಡೆಯನ್ನು ಸಾಧಿಸಿದ್ದಾರೆ.


