Homeಅಂತರಾಷ್ಟ್ರೀಯವಿಜಯ್ ಮಲ್ಯನನ್ನು ‘ದಿವಾಳಿ’ ಎಂದು ಘೋಷಿಸಿದ ಲಂಡನ್ ನ್ಯಾಯಾಲಯ

ವಿಜಯ್ ಮಲ್ಯನನ್ನು ‘ದಿವಾಳಿ’ ಎಂದು ಘೋಷಿಸಿದ ಲಂಡನ್ ನ್ಯಾಯಾಲಯ

- Advertisement -
- Advertisement -

ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ದಿವಾಳಿಯಾಗಿದ್ದಾರೆ ಎಂದು ಲಂಡನ್‌ ನ್ಯಾಯಾಲಯ ಸೋಮವಾರ ಘೋಷಿಸಿದೆ. ಈ ಘೋಷಣೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇತೃತ್ವದ ಬ್ಯಾಂಕುಗಳ ಒಕ್ಕೂಟವು ವಿಶ್ವದಾದ್ಯಂತ ಇರುವ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನೆರವಾಗಲಿದೆ.

ವಿಜಯ್‌ ಮಲ್ಯ ಭಾರತದಲ್ಲಿ 9,000 ಕೋಟಿ ರೂ.ಗಳ ಸಾಲ ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದಾರೆ.

“15.42 (ಯುಕೆ ಸಮಯ) ದಂತೆ, ನಾನು ವಿಜಯ್‌ ಮಲ್ಯ ಅವರನ್ನು ದಿವಾಳಿಯೆಂದು ತೀರ್ಪು ನೀಡುತ್ತೇನೆ” ಎಂದು ನ್ಯಾಯಾಧೀಶ ಮೈಕೆಲ್ ಬ್ರಿಗ್ಸ್ ಲಂಡನ್ ಹೈಕೋರ್ಟ್‌ನ ಚಾನ್ಸರಿ ವಿಭಾಗದ ಆನ್‌ಲೈನ್‌ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತವರು ಬಿಜೆಪಿ ಸೇರಿ ಕಳಂಕರಹಿತ ಎನಿಸಿಕೊಂಡವರ ಪಟ್ಟಿ ಇಲ್ಲಿದೆ

ಎಸ್‌ಬಿಐ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ದಿವಾಳಿತನದ ಆದೇಶವನ್ನು ತಮ್ಮ ಪರವಾಗಿ ನೀಡಬೇಕೆಂದು ವಾದಿಸಿತ್ತು. ಭಾರತೀಯ ಬ್ಯಾಂಕುಗಳನ್ನು ಕಾನೂನು ಸಂಸ್ಥೆ ಟಿಎಲ್‌ಟಿ ಎಲ್‌ಎಲ್‌ಪಿ ಮತ್ತು ನ್ಯಾಯವಾದಿ ಮಾರ್ಸಿಯಾ ಶೆಕರ್ಡೆಮಿಯನ್ ಪ್ರತಿನಿಧಿಸಿದ್ದರು.

‘‘ವಿಜಯ್‌ ಮಲ್ಯ ತಾನು ಪಡೆದ ಸಾಲವನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ಪೂರ್ತಿಯಾಗಿ, ನಿಗದಿತ ಅವಧಿಯೊಳಗೆ ಹಿಂದಿರುಗಿಸುತ್ತಾರೆ ಎಂದು ಹೇಳಲು ಸಾಕಷ್ಟು ಆಧಾರಗಳಿಲ್ಲ” ಎಂದು ನ್ಯಾಯಾಧೀಶರು ತನ್ನ ಆದೇಶದಲ್ಲಿ ಹೇಳಿದ್ದಾರೆ.

ವಿಜಯ ಮಲ್ಯ ಅವರನ್ನು ಪ್ರತಿನಿಧಿಸಿದ್ದ ವಕೀಲರು, ‘ದಿವಾಳಿ’ ಎಂದು ಘೋಷಿಸಿದ ಆದೇಶವನ್ನು ಪ್ರಶ್ನಿಸಲು ಅವಕಾಶ ಕೊಡಬೇಕು ಎಂದು ಅರ್ಜಿಯನ್ನು ಸಲ್ಲಿಸಿದರು. ಆದರೆ, ಈ ಮೇಲ್ಮನವಿಯು ಯಶಸ್ಸು ಕಾಣುವ ಸಾಧ್ಯತೆ ಇಲ್ಲ ಎಂದು ನ್ಯಾಯಾಧೀಶರು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮಗೆ ಯಾವ ಧರ್ಮವು ಅಗತ್ಯವಿಲ್ಲ ಕಾರಣ ಅಧಿಕಾರ ವಂದೇ ಜೀವವಿರುವವರೆಗೆ ಸಂತೋಷಪಡಲು ಕೊಡುವಂತಹ ಒಂದು ನೀತಿ ಹಾಗಾಗಿ ಯಾವ ಧರ್ಮವು ನಮಗೆ ಸಮೀಪಿಸಲು ಲಾರದು ಹಾಗಾಗಿ ಯಾವ ಧರ್ಮವನ್ನು ನಾವು ಕಡೆಗಣಿಸದೆ ಎಲ್ಲ ಧರ್ಮವನ್ನು ಸಮಾನವಾಗಿ ಸ್ವೀಕರಿಸಿ ಇರುವವರಿಗೆ ಅಧಿಕಾರದಲ್ಲಿದ್ದು ಸಂತೋಷಪಟ್ಟು ಮುಂದುವರಿಯುವುದೇ ಅಭಿಪ್ರಾಯ ರಾಜಕೀಯ ದೇಶದ ಧರ್ಮ ಇದೇ ರೀತಿ ಇದೆ ಈ ದೇಶದ ಹತ್ತು ಸಾವಿರ ವರ್ಷಗಳಿಂದ ನಾವು ಪಡೆದುಕೊಂಡಿರುವ ಸಿವಿಲೈಜೇಷನ್.WE ARE VERY GREAT IN THIS WORLD.
    BHASKER P

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...