Homeಅಂತರಾಷ್ಟ್ರೀಯಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

- Advertisement -
- Advertisement -

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ ಬಯಲಾದ ಕಾರಣ ‘ಲೇಬರ್ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗುವುದು ತನಗೆ ಇಷ್ಟವಿಲ್ಲ’ ಎಂದು ಮ್ಯಾಂಡೆಲ್ಸನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಕಳೆದ ವರ್ಷ ಜೆಫ್ರಿ ಎಪ್‌ಸ್ಟೀನ್‌ ಜೊತೆಗಿನ ಹಳೆಯ ಸಂಬಂಧದ ಹಿನ್ನೆಲೆ ಅಮೆರಿಕದ ಬ್ರಿಟಿಷ್ ರಾಯಭಾರಿ ಹುದ್ದೆಯಿಂದ ವಜಾಗೊಂಡಿದ್ದ ಮಾಜಿ ಕ್ಯಾಬಿನೆಟ್ ಸಚಿವ ಲಾರ್ಡ್ ಮ್ಯಾಂಡೆಲ್ಸನ್ ಅವರ ಹೆಸರು, ಕಳೆದ ಶುಕ್ರವಾರ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಹೊಸ ದಾಖಲೆಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಈ ಹೊಸ ಫೈಲ್‌ಗಳಲ್ಲಿ ಎಪ್‌ಸ್ಟೀನ್ ಮ್ಯಾಂಡೆಲ್ಸನ್ ಅವರಿಗೆ ಹಣಕಾಸಿನ ನೆರವು ನೀಡಿದ್ದ ಬಗ್ಗೆ ಮತ್ತು ಮ್ಯಾಂಡೆಲ್ಸನ್ ಸರ್ಕಾರಿ ನೀತಿಗಳ ಬಗ್ಗೆ ಎಪ್‌ಸ್ಟೀನ್ ಜೊತೆ ಚರ್ಚಿಸಿದ ಬಗ್ಗೆ ಸಂಶಯಾಸ್ಪದ ವಿವರಗಳಿವೆ ಎಂದು ವರದಿಯಾಗಿದೆ.

ಎಪ್‌ಸ್ಟೀನ್ ಕಡೆಯಿಂದ ತನಗೆ ಯಾವುದೇ ಹಣಕಾಸಿನ ನೆರವು ಸಿಕ್ಕಿಲ್ಲ ಎಂದು ಮ್ಯಾಂಡೆಲ್ಸನ್ ವಾದಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ಸದಸ್ಯತ್ವ ತ್ಯಜಿಸುತ್ತಿರುವುದಾಗಿ ಹೇಳಿದ್ದಾರೆ. ಈ ನಡುವೆ ಮ್ಯಾಂಡೆಲ್ಸನ್ ಅವರನ್ನು ಹೌಸ್ ಆಫ್ ಲಾರ್ಡ್ಸ್‌ನಿಂದಲೂ ಹೊರಹಾಕಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.

ಅಮೆರಿಕದ ನ್ಯಾಯಾಂಗ ಇಲಾಖೆಯು ಇತ್ತೀಚೆಗೆ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ, ಜೆಫ್ರಿ ಎಪ್‌ಸ್ಟೀನ್ 2003 ಮತ್ತು 2004ರ ಅವಧಿಯಲ್ಲಿ ಲಾರ್ಡ್ ಮ್ಯಾಂಡೆಲ್ಸನ್ ಅವರಿಗೆ ಒಟ್ಟು 75,000 ಡಾಲರ್ (£55,000) ಹಣವನ್ನು ಪಾವತಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಹಣವನ್ನು ತಲಾ 25,000 ಡಾಲರ್ ಮೊತ್ತದ ಮೂರು ಪ್ರತ್ಯೇಕ ಕಂತುಗಳಲ್ಲಿ ವರ್ಗಾಯಿಸಲಾಗಿತ್ತು ಎನ್ನಲಾಗಿದೆ.

ಭಾನುವಾರದಂದು ಲೇಬರ್ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಲಾರ್ಡ್ ಮ್ಯಾಂಡೆಲ್ಸನ್, “ಈ ವಾರಾಂತ್ಯದಲ್ಲಿ ಜೆಫ್ರಿ ಎಪ್‌ಸ್ಟೀನ್ ಸುತ್ತ ಸೃಷ್ಟಿಯಾಗಿರುವ ತೀವ್ರ ಆಕ್ರೋಶದ ವಿದ್ಯಮಾನಗಳೊಂದಿಗೆ ನನ್ನ ಹೆಸರು ಮತ್ತೆ ತಳುಕು ಹಾಕಿಕೊಂಡಿದೆ. ಈ ಬಗ್ಗೆ ನಾನು ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ಮುಂದುವರಿದು, “ಸುಮಾರು 20 ವರ್ಷಗಳ ಹಿಂದೆ ಎಪ್‌ಸ್ಟೀನ್ ನನಗೆ ಹಣ ಪಾವತಿ ಮಾಡಿದ್ದಾನೆ ಎಂಬ ಆರೋಪಗಳು ಸುಳ್ಳು ಎಂದು ನಾನು ನಂಬುತ್ತೇನೆ. ಈ ಬಗ್ಗೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ ಅಥವಾ ನೆನಪೂ ಇಲ್ಲ. ಆದರೂ ಈ ವಿಚಾರಗಳ ಬಗ್ಗೆ ನಾನು ಸ್ವತಃ ತನಿಖೆ ನಡೆಸುವ ಅಗತ್ಯವಿದೆ” ಎಂದು ಹೇಳಿದ್ದಾರೆ.

“ಈ ತನಿಖೆ ನಡೆಸುವ ಸಮಯದಲ್ಲಿ ಲೇಬರ್ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗುವುದು ನನಗೆ ಇಷ್ಟವಿಲ್ಲ, ಆದ್ದರಿಂದ ನಾನು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಮ್ಯಾಂಡೆಲ್ಸನ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಹಿಂದೆಯೇ ಯಾರ ಧ್ವನಿಯನ್ನು ಆಲಿಸಬೇಕಿತ್ತೋ ಅಂತಹ ಮಹಿಳೆಯರು ಮತ್ತು ಹುಡುಗಿಯರಲ್ಲಿ (ಎಪ್‌ಸ್ಟೀನ್‌ ಸಂತ್ರಸ್ತರಲ್ಲಿ) ಮತ್ತೊಮ್ಮೆ ಕ್ಷಮೆಯಾಚಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ” ಎಂದು ಮ್ಯಾಂಡೆಲ್ಸನ್ ಹೇಳಿದ್ದಾರೆ.

“ನಾನು ನನ್ನ ಜೀವನವನ್ನೇ ಲೇಬರ್ ಪಕ್ಷದ ಮೌಲ್ಯಗಳು ಮತ್ತು ಅದರ ಯಶಸ್ಸಿಗಾಗಿ ಮುಡಿಪಾಗಿಟ್ಟಿದ್ದೇನೆ. ಪಕ್ಷದ ಹಿತದೃಷ್ಟಿಯಿಂದಲೇ ನಾನು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಮ್ಯಾಂಡೆಲ್ಸನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಹೊಸದಾಗಿ ಬಿಡುಗಡೆಯಾದ ದಾಖಲೆಗಳು ಅಧಿಕೃತವೇ ಎಂದು ತನಗೆ ತಿಳಿದಿಲ್ಲ ಎಂದು ಲಾರ್ಡ್ ಮ್ಯಾಂಡೆಲ್ಸನ್ ಭಾನುವಾರ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...