Homeಮುಖಪುಟರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ಶ್ರೀರಾಮಚಂದ್ರ ಸಮಾಜವಾದಿ ಪಕ್ಷಕ್ಕೆ ಸೇರಿದವರು, ನಾವು ರಾಮನ ಭಕ್ತರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಅಜಂಘರ್​​ನಿಂದ ತೆರಳುತ್ತಿದ್ದಾಗ ಕೆಲ ಸಮಯ ಅಯೋಧ್ಯೆಯಲ್ಲಿ ವಿರಾಮ ತೆಗೆದುಕೊಳ್ಳುವಾಗ ಈ ಹೇಳಿಕೆ ನೀಡಿದ್ದಾರೆ.

ಭಗವಾನ್ ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವರು. ನಾವು ಶ್ರೀ ರಾಮ ಮತ್ತು ಶ್ರೀ ಕೃಷ್ಣನ ಭಕ್ತರು ಮತ್ತು ಶೀಘ್ರದಲ್ಲೇ ತನ್ನ ಕುಟುಂಬ ಸದಸ್ಯರೊಂದಿಗೆ ಅಯೋಧ್ಯೆಗೆ ಭೇಟಿ ನೀಡಿ ದೇವರನ್ನು ಪೂಜಿಸುವುದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಆದರೆ, ಅಯೋಧ್ಯೆಗೆ ಭೇಟಿಯ ನಿಗಧಿ ದಿನಾಂಕವನ್ನು ನಿರ್ದಿಷ್ಟಪಡಿಸಿಲ್ಲ.

ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ಸುದ್ದಿಗಾರರೊಂದಿಗೆ ಪುಟ್ಟ ಸಂವಾದ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, ತಾನು ತಮ್ಮ ಸರ್ಕಾರದ ಅವಧಿಯಲ್ಲಿ ರಾಮ ದೇವಾಲಯದ ಅಭಿವೃದ್ಧಿಗಾಗಿ ಮಾಡಿದ ವಿವಿಧ ಕೆಲಸಗಳನ್ನು ತಿಳಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅವರು ಮಾಡಿದ ವಿವಿಧ ಕೆಲಸಗಳಲ್ಲಿ, ಅಯೋಧ್ಯೆಯ ಸುತ್ತಲಿನ ರಿಂಗ್ ರಸ್ತೆಯಲ್ಲಿ “ಪಾರಿಜಾತ ಮರಗಳ” ತೋಟವನ್ನು ಮಾಡಿದ್ದು, ಈ ರಸ್ತೆಯ ಉದ್ದಕ್ಕೂ ಧಾರ್ಮಿಕ ಪ್ರಾಮುಖ್ಯತೆಯೊಂದಿಗೆ ವಿವಿಧ ಜಾತಿಯ ಮರಗಳನ್ನು ನೆಟ್ಟಿದ್ದನ್ನು ನೆನಪಿಸಿಕೊಂಡಿದ್ದಾರೆ.

ಇತ್ತ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ನಿರ್ಮಿಸಲಾಗುತ್ತಿರುವ ದೇವಾಲಯಕ್ಕಾಗಿ ಸಾಮೂಹಿಕ ಸಂಪರ್ಕ ಮತ್ತು ಕೊಡುಗೆ ಅಭಿಯಾನವನ್ನು ನಡೆಸಲು ನಿರ್ಧರಿಸಿದೆ. ಈ ಅಭಿಯಾನವು ಅಯೋಧ್ಯೆ ಚಳವಳಿಯ ಐತಿಹಾಸಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನ ಹರಿಸಲಿದೆ ಎಂದು ರಾಮ್ ಮಂದಿರ ಟ್ರಸ್ಟ್ ಟ್ವಿಟರ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ತಿಳಿಸಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂಕೋರ್ಟ್ ತೀರ್ಪಿನ ನಂತರ ಸರ್ಕಾರ ಈ ಟ್ರಸ್ಟ್ ಅನ್ನು ರಚಿಸಿತ್ತು. ಅಯೋಧ್ಯೆಯ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಈ ಟ್ರಸ್ಟ್  ಸ್ಥಾಪಿಸಲಾಗಿದೆ.


ಇದನ್ನೂ ಓದಿ: ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...