Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...