Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...