Homeಮುಖಪುಟಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

ಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

- Advertisement -
- Advertisement -

ಮುಂಬರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಪ್ರಬಲ ನಾಯಕರಿಗೆ ಟಿಕೆಟ್‌ ನಿರಾಕರಣೆ ಮಾಡಿರುವುದು ಪಕ್ಷದ ಪಾಳಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಹಲವು ಬಿಜೆಪಿ ನಾಯಕರು  ಇತರ ಪಕ್ಷಗಳಿಗೆ ಪಕ್ಷಾಂತರವಾಗಲು ಅಥವಾ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ಇತ್ತೀಚೆಗೆ ಪ್ರಕಟಿಸಿದ ತನ್ನ 59 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ವಪಕ್ಷೀಯರಿಗಿಂತ, ಕಾಂಗ್ರೆಸ್‌ನಿಂದ ಪಕ್ಷಾಂತರವಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಿದೆ. ಇದು ಬಿಜೆಪಿ ನಾಯಕರಿಗೆ ಅಘಾತ ಉಂಟುಮಾಡಿದ್ದು, ಹಲವರು ಬೇಸರಗೊಂಡಿದ್ದಾರೆ. ಈ ಬಗ್ಗೆ ನಾಯಕರು ಬಹಿರಂಗವಾಗಿಯೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರಮುಖರೆಂದರೆ ಥರಾಲಿ ಕ್ಷೇತ್ರದ ಶಾಸಕಿಯಾಗಿರುವ ಮುನ್ನಿ ದೇವಿ ಶಾ ಮತ್ತು ದ್ವಾರಹತ್ ಶಾಸಕ ಮಹೇಶ್ ನೇಗಿಯವರಾಗಿದ್ದಾರೆ.

ಪಕ್ಷದ ಕೇಂದ್ರ ನಾಯಕತ್ವವು ನನಗೆ ಏಕೆ ಟಿಕೆಟ್ ನಿರಾಕರಿಸಿದೆ ಎಂಬುದನ್ನು ವಿವರಿಸಬೇಕು. ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯುವುದರ ಜೊತೆಗೆ ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ಮುನ್ನಿ ದೇವಿ ಶಾ ಹೇಳಿದ್ದಾರೆ.

“ಪಕ್ಷವು ಸಮರ್ಪಿತ ಕಾರ್ಯಕರ್ತನನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದರೆ ತನಗೆ ಅಷ್ಟು ನೋವಾಗುತ್ತಿರಲಿಲ್ಲ, ಆದರೆ ಅದು ಕಾಂಗ್ರೆಸ್ ಹಿನ್ನೆಲೆಯ ವ್ಯಕ್ತಿಗೆ ಆದ್ಯತೆ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಸಿಯುವಂತೆ ಮಾಡುತ್ತದೆ” ಎಂದು ಮುನ್ನಿ ದೇವಿ ಹೇಳಿದ್ದಾರೆ.

ಕ್ಷೇತ್ರದ ಶಾಸಕರಾಗಿದ್ದ ಮಗನ್‌ ಲಾಲ್ ಶಾ ಅವರ ಮರಣದ ನಂತರ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿಯಾಗಿದ್ದ ಮುನ್ನಿ ದೇವಿ ಶಾ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ತಾನೀಗ ತನ್ನ ಬೆಂಬಲಿಗರಿಂದ ಒತ್ತಡಕ್ಕೆ ಒಳಗಾಗಿದ್ದು, ಬಿಜೆಪಿಯು ಕಾಂಗ್ರೆಸ್ ಪಕ್ಷಾಂತರಿ ಭೋಪಾಲ್ ರಾಮ್ ತಮ್ತಾ ಅವರನ್ನು ಕಣಕ್ಕಿಳಿಸಿದ ಕ್ಷೇತ್ರದಿಂದಲೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಪಿತೂರಿಯಿಂದಾಗಿ ತನಗೆ ಟಿಕೆಟ್ ನಿರಾಕರಿಸಲಾಗಿದೆ ದ್ವಾರಹತ್‌ ಶಾಕಸ ಮಹೇಶ್‌ ನೇಗಿ ಹೇಳಿದ್ದಾರೆ. ಎಲ್ಲಾ ಕ್ಷೇತ್ರ ಸಮೀಕ್ಷೆಗಳಲ್ಲಿ ತನ್ನ ಹೆಸರು ಅಗ್ರಸ್ಥಾನದಲ್ಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ನರೇಂದ್ರ ನಗರ ಕ್ಷೇತ್ರ ಬಿಜೆಪಿಯು ಮತ್ತೊಮ್ಮೆ ಸಂಪುಟ ಸಚಿವ ಸುಬೋಧ್ ಉನಿಯಾಲ್ ಅವರನ್ನು ಕಣಕ್ಕಿಳಿಸಿದೆ. ಇದರ ವಿರುದ್ದ ಬಂಡಾಯವೆದ್ದಿರುವ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಓಂ ಗೋಪಾಲ್ ರಾವತ್ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

“ಸಂಘಟನೆಯನ್ನು ಬಲಪಡಿಸಲು ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಸಮರ್ಪಿತ ಕಾರ್ಯಕರ್ತರನ್ನು ಬಿಜೆಪಿ ಕಾಳಜಿ ವಹಿಸುವುದಿಲ್ಲ. ಅದಕ್ಕೆ ಯಾವುದೇ ತತ್ವಗಳು ಅಥವಾ ಮೌಲ್ಯಗಳಿಲ್ಲ. ಅದಕ್ಕೆ ಬೇಕಾಗಿರುವುದು ಅಧಿಕಾರ” ಎಂದು ರಾವತ್ ಪಕ್ಷದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ .

ಬಿಜೆಪಿಯಿಂದ ಧನೌಲ್ತಿಯಿಂದ ಕಣಕ್ಕಿಳಿದಿರುವ ಪ್ರೀತಮ್ ಸಿಂಗ್ ಪನ್ವಾರ್ ವಿರುದ್ಧ ಮಾಜಿ ಶಾಸಕ ಮಹಾವೀರ ರಂಗಡ್ ಕೂಡ ಅತೃಪ್ತರಾಗಿದ್ದಾರೆ.ಅವರು ಶುಕ್ರವಾರದಂದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಘನ್ಸಾಲಿಯಿಂದ ಸ್ಪರ್ಧಿಸಿರುವ ದರ್ಶನ್ ಲಾಲ್ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಕರ್ಣಪ್ರಯಾಗದಿಂದ ಟಿಕೆಟ್‌ಗಾಗಿ ದೀರ್ಘಕಾಲ ಪ್ರಯತ್ನಿಸುತ್ತಿದ್ದ ಟಿಕಾ ಮೈಖುರಿ, ಪಕ್ಷವು ಅನಿಲ್ ನೌಟಿಯಾಲ್ ಅವರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸಿದಾಗಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಸ್ವತಂತ್ರ ಹಾಲಿ ಶಾಸಕ ರಾಮ್ ಸಿಂಗ್ ಕೈರಾ ಅವರನ್ನು ಪಕ್ಷವು ಕ್ಷೇತ್ರದಿಂದ ಕಣಕ್ಕಿಳಿಸಿದ್ದರಿಂದ ಭೀಮತಾಲ್‌ನಲ್ಲಿ ಮನೋಜ್ ಶಾ ಅವರು ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. 2002ರಿಂದ ಟಿಕೆಟ್‌ಗಾಗಿ ರೇಸ್‌ನಲ್ಲಿದ್ದೇನೆ, ನನಗೆ ಟಿಕೆಟ್ ನಿರಾಕರಿಸಿರುವುದು ಅನ್ಯಾಯ, ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆದರೆ ಈ ಎಲ್ಲಾ ಬಂಡಾಯವು ಒಂದೆರೆಡು ದಿನಗಳಲ್ಲಿ ಶಮನವಾಗಲಿ ಎಂದು ಬಿಜೆಪಿ ಹೇಳಿದೆ. “ಒಂದು ಕ್ಷೇತ್ರದಿಂದ ಟಿಕೆಟ್‌ಗಾಗಿ ಅನೇಕ ಸ್ಪರ್ಧಿಗಳು ಇರುತ್ತದೆ. ಆದರೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಒಬ್ಬರಿಗೆ ಮಾತ್ರ ಟಿಕೆಟ್‌ ನೀಡುತ್ತೇವೆ. ಕೇಂದ್ರ ನಾಯಕತ್ವದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು” ಎಂದು ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ಹೇಳಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇದು ಅವರ ಆರಂಭಿಕ ಪ್ರತಿಕ್ರಿಯೆಯಷ್ಟೆ, ಅವರು ಅರ್ಥಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದರೆ.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...