Homeಕರ್ನಾಟಕಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

- Advertisement -
- Advertisement -

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಇಬ್ಬರು ನಾಯಕರೂ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚುನಾವಣೆಗಾಗಿ ರಾಹುಲ್ ಗಾಂಧಿ ಈಗಾಗಲೇ ಎಲ್ಲೆಲ್ಲಿ ಹೋಗಿದ್ದಾರೋ, ಎಲ್ಲ ಕಡೆಯಲ್ಲಿಯೂ ಕಾಂಗ್ರೆಸ್ ಸೋತಿದೆ.‌ ಈಗ ಕಾಂಗ್ರೆಸ್ ಪಕ್ಷ ಆರಂಭಿಸಿದ ‘ಭಾರತ್ ಜೋಡೋ ಯಾತ್ರೆ’ಯು ಕಾಂಗ್ರೆಸ್ ಮುಕ್ತ ಭಾರತದ ಮುನ್ಸೂಚನೆಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ” ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಬೊಮ್ಮಾಯಿಯವರು ‘ವಿದ್ಯಾಸಿರಿ’ಯನ್ನು ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್‌ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್, ಡಿ ಕೆ ಶಿವಕುಮಾರ್ ಸೇರಿ ಎಲ್ಲರೂ ಜಾಮೀನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರಿಗಳ ಪಕ್ಷ. ಸಿದ್ದರಾಮಯ್ಯರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಹಗರಣ ಆಗಿದೆ” ಎಂದು ನಳಿನ್ ಕುಮಾರ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,“ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದು ಹೇಳಿದ್ದಾರೆ.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಅವರು ಹೇಳಿದ್ದಾರೆ.

“ಯಾವಾಗಲೂ ಸಂವಿಧಾನ ಪರವಾಗಿ ಮಾತನಾಡುವ ಸಿದ್ದರಾಮಣ್ಣ ಅಂದು ನಿಮ್ಮ ನೈತಿಕತೆ ಎಲ್ಲಿತ್ತು? ನೀವು ಯಾರಿಗೆ ಉಪದೇಶ ಹೇಳುತ್ತೀರಾ, ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ. ಅಧಿಕಾರಕ್ಕಾಗಿ ನೀವು ಏನು ಮಾಡದ್ರಿ ಎಂಬುದು ಅಂದು ಜಗಜ್ಜಾಹೀರಾಗಿದೆ” ಎಂದು ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದವರು ವೀರರು

“ಮೈತ್ರಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು 17 ಜನರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಸುಮ್ಮನೆ ಬರಲಿಲ್ಲ. ರಾಜೀನಾಮೆ ನೀಡಿ ಮತ್ತೊಮ್ಮೆ ಜನರ ನಡುವೆ ಹೋಗುತ್ತೇವೆ ಎಂದು ಮತ್ತೆ ಗೆದ್ದು ಬಂದರು. ಅವರೆಲ್ಲರೂ ವೀರರು” ಎಂದು ಬೊಮ್ಮಾಯಿ ಅವರು ಆಪರೇಷನ್‌ ಕಮಲ ವೇಳೆ ಬಿಜೆಪಿ ಸೇರಿದ ಕಾಂಗ್ರೆಸ್‌ನ ನಾಯಕರನ್ನು ಕೊಂಡಾಡಿದ್ದಾರೆ.

“ಕೋವಿಡ್ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅಧಿಕಾರದಲ್ಲಿ ಇರದಿದ್ದರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ, ಜನ ನರಕಕ್ಕೆ ಹೋಗುತ್ತಿದ್ದರು. ಕಾಂಗ್ರೆಸ್‌ನವರದ್ದು ಕೇವಲ ಅಧಿಕಾರದ ದಾಹ ಮಾತ್ರ. ಅವರಿಗೆ ಜಸೇವೆಯ ಯಾವ ಉದ್ದೇಶವೂ ಇಲ್ಲ; ಎಲ್ಲವೂ ನಾಟಕ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೆರೆ ಖಾಲಿ ಬೀಳುತ್ತದೆ: ಸಿ ಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, “ಬಿಜೆಪಿ ಅಧಿಕಾರಕ್ಕೆ ಬಂದಾಗ ಕೆರೆ ತುಂಬುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೆರೆ ಖಾಲಿ ಬೀಳುತ್ತದೆ. ಬಿಜೆಪಿ ಕಾಲ್ಗುಣ ಒಳ್ಳೆಯದಿದೆ. ಈ ಬಾರಿ ಇಲ್ಲಿನ 18 ಶಾಸಕರ ಸ್ಥಾನದಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭರವಸೆಗಳು ಇಲ್ಲದೆ ಹೋದಾಗ ಚಡಪಡಿಕೆಯ ಮಾತುಗಳು ಸ್ವಾಭಾವಿಕ ಎಲ್ಲಾ ಕಳೆದು ಹೋದ ಮೇಲೆ ಬರುವ ಮಾತುಗಳು ಇಂಥವುಗಳೆ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...