Homeಮುಖಪುಟ'ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮಪ್ರಕರಣಗಳೇ ಕಾರಣ' ಎಂದ ರಾಜಸ್ಥಾನ ಸಚಿವರ ಹೇಳಿಕೆಗೆ ಆಕ್ಷೇಪ

‘ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮಪ್ರಕರಣಗಳೇ ಕಾರಣ’ ಎಂದ ರಾಜಸ್ಥಾನ ಸಚಿವರ ಹೇಳಿಕೆಗೆ ಆಕ್ಷೇಪ

- Advertisement -
- Advertisement -

ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮಪ್ರಕರಣಗಳೇ ಕಾರಣ ಎಂದು ರಾಜಸ್ಥಾನದ ಸಚಿವ ಶಾಂತಿ ಧಾರಿವಾಲ್ ಹೇಳಿದ್ದಾರೆ. ಆದರೆ ಪೋಷಕರು ಸಚಿವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಹಾಸ್ಟೆಲ್ ನಲ್ಲಿ ಸಾವನ್ನಪ್ಪಿದ 16 ವರ್ಷದ ಬಾಲಕಿ ಸೇರಿದಂತೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಪ್ರೇಮ ಪ್ರಕರಣಗಳು ಕಾರಣ ಎಂದು ರಾಜಸ್ಥಾನದ ಸಚಿವ ಶಾಂತಿ ಧಾರಿವಾಲ್ ಹೇಳಿದ್ದಾರೆ. ಇದಕ್ಕೆ ಸಾಕ್ಷ್ಯ ಇದ್ದರೆ ಅದನ್ನು ನನಗೆ ನೀಡಿ ಎಂದು ಮೃತ ಬಾಲಕಿಯ ತಂದೆ ರವೀಂದ್ರ ಸಿನ್ಹಾ ಒತ್ತಾಯಿಸಿದ್ದಾರೆ.

ಈ ಬಗ್ಗೆ ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ”ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಬಾಲಕಿ ಬಿಟ್ಟುಹೋದ ಪತ್ರದಲ್ಲಿದೆ” ಎಂದು ಹೇಳಿಕೊಂಡಿದ್ದಾರೆ.

”ಇವತ್ತು ಒಬ್ಬ ಹುಡುಗಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲು ಬೇಸರವಾಗುತ್ತದೆ. ಅಕ್ರಮ ಸಂಬಂಧದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಬಾಲಕಿ ಪತ್ರವನ್ನು ಬರೆದಿದ್ದಾಳೆ … ಇಲ್ಲಿ ಕೋಚಿಂಗ್ ವಿದ್ಯಾರ್ಥಿಗಳು ಮಾಡಿದ ಎಲ್ಲಾ ಆತ್ಮಹತ್ಯೆಗಳಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಸಂಪೂರ್ಣವಾಗಿ ತನಿಖೆ ಮಾಡಬೇಕಾಗಿದೆ” ಎಂದು ಧಾರಿವಾಲ್ ಸುದ್ದಿಗಾರರಿಗೆ ತಿಳಿಸಿದರು.

ಬಾಲಕಿಯು ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡದ್ದು, ಆಕೆಯ ಕೊಠಡಿಯಲ್ಲಿ ಯಾವುದೇ ಪತ್ರ ಅಥವಾ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿ ರಿಚಾ NEET ಆಕಾಂಕ್ಷಿಯಾಗಿದ್ದರು. ಅವರ ಮೃತದೇಹವನ್ನು ಸ್ವೀಕರಿಸಲು ಗುರುವಾರ ಬೆಳಿಗ್ಗೆ ರಾಂಚಿಯಿಂದ ಕೋಟಾ ತಲುಪಿದ ರಿಚಾ ಅವರ ತಂದೆ, ಸಚಿವ ಧಾರಿವಾಲ್ ಅವರ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಹಾಗೂ ಅವರ ಹೇಳಿಕೆಯನ್ನು ಸಾಬೀತುಪಡಿಸಲು ಸಾಕ್ಷ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

”ನನ್ನ ಮಗಳಿಗೆ ಯಾವುದೇ ಅಕ್ರಮ ಸಂಬಂಧ ಇರಲಿಲ್ಲ. ಅವರ ಬಳಿ (ಧಾರಿವಾಲ್) ಅಂತಹ ಯಾವುದೇ ಪುರಾವೆಗಳಿದ್ದರೆ, ಅದನ್ನು ಅವರು ನನ್ನೊಂದಿಗೆ ಹಂಚಿಕೊಳ್ಳಬೇಕು’’ ಎಂದು ಹುಡುಗಿಯ ತಂದೆ ರವೀಂದ್ರ ಸಿನ್ಹಾ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

ಕೋಟಾದ ಕೆಲವು ಹುಡುಗರು ಕೋಚಿಂಗ್ ಇನ್ಸ್ಟಿಟ್ಯೂಟ್ ಗೆ ಹೋಗುವಾಗ ಮತ್ತು ಬರುವಾಗ ಚುಡಾಯಿಸುತ್ತಾರೆ ಎಂದು ಮಗಳು ದೂರು ನೀಡಿದ್ದರು ಎಂದು ಸಿನ್ಹಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...