Homeಮುಖಪುಟಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ

- Advertisement -
- Advertisement -

ಲವ್ ಜಿಹಾದ್ ಅನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಧರ್ಮವನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಭಾರತಿಯ ಜನತಾ ಪಾರ್ಟಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಕುರಿತು ಚರ್ಚೆಗಳಾಗುತ್ತಿವೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಹರಿಯಾಣ ರಾಜ್ಯಗಳು ಈ ಕುರಿತು ಅನೇಕ ಹೇಳಿಕೆ ನೀಡಿವೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ತಮ್ಮ ಬೆಂಬಲ ನೆಲೆಯನ್ನು ಬಲಪಡಿಸಲು ಧರ್ಮವನ್ನು ರಾಜಕೀಯ ಸಾಧನವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಳಸಿಕೊಳ್ಳುತ್ತಿದೆ ಎಂದು ನುಸ್ರತ್ ಆರೋಪಿಸಿದ್ದಾರೆ.

‘ಲವ್ ಮತ್ತು ಜಿಹಾದ್’ ಎಂಬ ಸಂಬಂಧವಿಲ್ಲದ ಎರಡು ಪ್ರತ್ಯೇಕ ವಿಷಯಗಳನ್ನು ಒಂದು ಮಾಡಿ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

“ಪ್ರೀತಿ” ಮತ್ತು “ಜಿಹಾದ್” ಎರಡು ವಿಭಿನ್ನ ವಿಷಯಗಳು, ಅವು ಎಂದಿಗೂ ಪರಸ್ಪರ ಕೈಜೋಡಿಸುವುದಿಲ್ಲ. ಯಾರು ಯಾರೊಂದಿಗೆ ಇರಬೇಕೆಂದು ಬಯಸುತ್ತಾರೆ ಎಂಬುದು ವ್ಯಕ್ತಿಯ ವೈಯಕ್ತಿಕ ಆಯ್ಕೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

“ಪ್ರೀತಿ ತುಂಬಾ ವೈಯಕ್ತಿಕ. ಪ್ರೀತಿ ಮತ್ತು ಜಿಹಾದ್ ಪರಸ್ಪರ ಕೈಜೋಡಿಸುವುದಿಲ್ಲ. ಬಿಜೆಪಿಗರು ಚುನಾವಣೆಗೆ ಸ್ವಲ್ಪ ದಿನ ಇರುವ ಮೊದಲು ಈ ರೀತಿಯ ವಿಷಯಗಳೊಂದಿಗೆ ಬರುತ್ತಾರೆ. ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ” ಎಂದು ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ.

ಬಂಗಾಳಿ ನಟಿ, ರಾಜಕಾರಣಿ ನುಸ್ರತ್ ಜಹಾನ್ ಉದ್ಯಮಿ ನಿಖಿಲ್ ಜೈನ್ ಎಂಬುವವರನ್ನು ವಿವಾಹವಾಗಿದ್ದಾರೆ.

ಇದಕ್ಕೂ ಮೊದಲು, ನುಸ್ರತ್ ಜಹಾನ್, ಬಂಗಾಳಿಗರ ಅತಿದೊಡ್ಡ ಹಬ್ಬವಾದ ದುರ್ಗಾ ಪೂಜೆಯ ಉತ್ಸವಗಳಲ್ಲಿ ಭಾಗವಹಿಸಿದ್ದಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿಗಳಿಂದ, ಇಸ್ಲಾಂ ಧರ್ಮಕ್ಕೆ ‘ಅಪಖ್ಯಾತಿ ತಂದಿದ್ದಾರೆ’ ಎಂದು ತೀವ್ರ ದಾಳಿಗೆ ಒಳಗಾಗಿದ್ದರು.

ಇತ್ತ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಸರ್ಕಾರ ಜಾರಿಗೆ ತರಲು ಹೊರಟ ಲವ್ ಜಿಹಾದ್ ಕಾನೂನಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ವ್ಯಕ್ತಿ ಸ್ವಾತಂತ್ಯ್ರವನ್ನು ಸರ್ಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ ಹಾಗೂ ಮತಾಂತರದ ವಿರುದ್ಧದ ಕಾನೂನು ತಪ್ಪಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.


ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...