Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...