HomeUncategorized’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

- Advertisement -
- Advertisement -

ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗು ಮತ್ತು ಅದನ್ನು ತಡೆಯಲು ಸರ್ಕಾರ ಕಾನೂನು ಜಾರಿಗೆ ತರುತ್ತಿದೆ. ಕೆಲವು ಸಂಸ್ಥೆಗಳು ಮದುವೆಗಾಗಿ ಮತಾಂತರ ಮಾಡುವಂತೆ ಯುವಕರನ್ನು ದಾರಿ ತಪ್ಪಿಸುತ್ತಿವೆ. ಈ ವಿದ್ಯಮಾನವು ಎಲ್ಲಾ ರಾಜ್ಯಗಳಲ್ಲಿ ಕಳೆದ ಏಳು-ಎಂಟು ವರ್ಷಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ

ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ನಂತರ ಈ ಚರ್ಚೆ ಮತ್ತೊಮ್ಮೆ ನಡೆಯುತ್ತಿರುವುದರಿಂದ, ಕಾನೂನು ತಜ್ಞರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. “ಸಾಮಾಜಿಕ ಅಶಾಂತಿ ಸೃಷ್ಟಿಸುವುದು ಇದರ ಉದ್ದೇಶ. ಆದ್ದರಿಂದ ಸಂವಿಧಾನದ ಚೌಕಟ್ಟಿನೊಳಗೆ ನಾವು ಕಾನೂನನ್ನು ಪರಿಚಯಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇದು ಲವ್ ಜಿಹಾದ್ ಅಲ್ಲವಂತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....