Homeಕರ್ನಾಟಕ'ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -
- Advertisement -

ಲವ್ ಜಿಹಾದ್ ತಡೆಗೆ, ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂಬ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದಾರೆ.

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದರು, ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕುಡ ಧ್ವನಿಗೂಡಿಸಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ’ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ..? ಎಂದು ಪ್ರಶ್ನಿಸಿದ್ದಾರೆ.

ವಿವಾಹಕ್ಕಾಗಿಯೇ ಮತಾಂತರವಾದರೇ ಅದು ಮಾನ್ಯವಲ್ಲ ಎಂಬ ಅಲಹಾಬಾದ್ ಕೋರ್ಟ್ ತೀರ್ಪನ್ನು ಅನುಕೂಲಕ್ಕೆ ತಕ್ಕಂತೆ ಬಳಸಲಾಗುತ್ತಿದೆ ಎಂದಿದ್ದಾರೆ.

’ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

’ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ’ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದರು. ಉತ್ತರಪ್ರದೇಶದಲ್ಲೂ


ಇದನ್ನೂ ಓದಿ: ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಸಿದ್ದರಾಮಯ್ಯನವರ ಅಭಿಪ್ರಾಯ ಸರಿಯಾಗಿದೆ. ನಮಗೆ ಉತ್ತರ ಪ್ರದೇಶದ ಆದಿತ್ಯನಾತರ ಆಡಳಿತ ಯಾವ ರೀತಿಯಲ್ಲೂ ಆದರ್ಶನೀಯವಲ್ಲ.

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ...

0
ರಾಜಸ್ಥಾನದಲ್ಲಿ ಭಾನುವಾರ (ಏ.21) ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಸುದ್ದಿ ಮತ್ತು ದ್ವೇಷ ಹರಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರಿಕ ಸಂಸ್ಥೆಗಳು...