Homeಮುಖಪುಟ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ತಡೆಯಲು ಕಾನೂನನ್ನು ತರುವುದು ಅಸಂವಿಧಾನಿಕ - ಅಶೋಕ್ ಗೆಹ್ಲೋಟ್

- Advertisement -
- Advertisement -

‘ಲವ್ ಜಿಹಾದ್’ ಎಂಬುದು ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಬಿಜೆಪಿ ಸೃಷ್ಟಿಸಿದ ಪದ. ಮದುವೆ ಎಂಬುದು ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದು, ಅದಕ್ಕೆ ಕಾನೂನು ತರುವುದು ಅಸಂವಿಧಾನಿಕ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ.

ಶುಕ್ರವಾರ(ನ. 20) ತಮ್ಮ ಸರಣಿ ಟ್ವಿಟ್‌ಗಳಲ್ಲಿ, ಗೆಹ್ಲೋಟ್ ಅವರು “ವಯಸ್ಕರ ನಡುವಿನ ಸಮ್ಮತಿಗೆ ರಾಜ್ಯ ಸರ್ಕಾರದ ಅನುಮತಿ ಅಗತ್ಯ ಎಂಬಂತ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಲವ್ ಜಿಹಾದ್ ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಬಿಜೆಪಿ ಸೃಷ್ಟಿಸಿದ ಪದವಾಗಿದೆ. ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ತಡೆಯಲು ಕಾನೂನನ್ನು ತರುವುದು ಸಂಪೂರ್ಣವಾಗಿ ಅಸಂವಿಧಾನಿಕ ಮತ್ತು ಅದು ಯಾವುದೇ ನ್ಯಾಯಾಲಯದಲ್ಲಿಯೂ ನಿಲ್ಲುವುದಿಲ್ಲ. ಪ್ರೀತಿಯಲ್ಲಿ ಜಿಹಾದ್‌ಗೆ ಸ್ಥಾನವಿಲ್ಲ” ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಮೊದಲ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಮೋದಿ-ಶಾ ಕಾರಣ: ಅಶೋಕ್ ಗೆಹ್ಲೋಟ್

ಮತ್ತೊಂದು ಟ್ವೀಟ್‌ನಲ್ಲಿ “ವಯಸ್ಕರ ನಡುವಿನ ಸಮ್ಮತಿಗೂ ರಾಜ್ಯ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ದೇಶದಲ್ಲಿ ಅವರು ಸೃಷ್ಟಿಸುತ್ತಿದ್ದಾರೆ. ಮದುವೆ ವೈಯಕ್ತಿಕ ನಿರ್ಧಾರ, ಅದರ ಮೇಲೆಯೂ ಅವರು ನಿರ್ಬಂಧ ವಿಧಿಸುತ್ತಿದ್ದಾರೆ. ಇದು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಂಡಂತೆ” ಎಂದು ಉಲ್ಲೇಖಿಸಿದ್ದಾರೆ.

“ಲವ್ ಜಿಹಾದ್” ವಿರುದ್ಧದ ಹೇಳಿಕೆಗಳನ್ನು “ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವ, ಸಾಮಾಜಿಕ ಸಂಘರ್ಷವನ್ನು ಉತ್ತೇಜಿಸುವ ಮತ್ತು ಸಾಂವಿಧಾನಿಕ ನಿಬಂಧನೆಗಳನ್ನು ಕಡೆಗಣಿಸುವ ತಂತ್ರ” ಎಂದು ಗೆಹ್ಲೋಟ್ ಬಣ್ಣಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಟ್ವಿಟ್‌ಗಳು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಸ್ಥಾನ ಮುಖ್ಯಂತ್ರಿಗೆ ತಿರುಗೇಟು ನೀಡಲು ಹಲವು ಪ್ರಕರಣಗಳಲ್ಲಿ ಬಾಧಿತರಾದ ಯುವತಿಯರನ್ನು ಉಲ್ಲೇಖಿಸಿ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಲವ್ ಜಿಹಾದ್” ಕಾರಣದಿಂದಾಗಿ ಸಾವಿರಾರು ಯುವತಿಯರು ಸಿಕ್ಕಿಬಿದ್ದಿದ್ದಾರೆ. ಪ್ರೇಮವಿವಾಹದ ನೆಪದಲ್ಲಿ ಹೆಸರು ಮತ್ತು ಧರ್ಮವನ್ನು ಬದಲಿಸುತ್ತಿರುವುದು ಲವ್ ಜಿಹಾದ್ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದರೆ, ಮಹಿಳೆಯರು ಮದುವೆ ನಂತರ “ತಮ್ಮ ತವರು ಮನೆಯ ಹೆಸರು ಮತ್ತು ಧರ್ಮವನ್ನು ಉಳಿಸಿಕೊಳ್ಳಲು ಮುಕ್ತರಾಗಿಲ್ಲ ಏಕೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿ.ಟಿ.ರವಿ, ಅಶೋಕ್ ಗೆಹ್ಲೋಟ್ ಅವರ ಟ್ವೀಟ್‌ಗಳಿಗೆ ಪ್ರತಿಕ್ರಿಯೆ ನೀಟಿದ್ದಾರೆ.

“ರಾಷ್ಟ್ರವನ್ನು ವಿಭಜಿಸುವುದು ಮತ್ತು ಕೋಮು ಸೌಹಾರ್ದತೆಗೆ ಭಂಗ ತರುವುದು ಕಾಂಗ್ರೆಸ್ಸಿನ ಏಕೈಕ ಕಾರ್ಯ. ಮದುವೆ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ, ಇದನ್ನು ಯಾರೂ ವಿವಾದ ಮಾಡುವುದಿಲ್ಲ. ಆದರೆ ಸಲ್ಮಾನ್ ಅವರನ್ನು ಮದುವೆಯಾದ ನಂತರ ಸುನೀತಾ ಶಬ್ನಮ್ ಆಗಲು ಕಾರಣವೇನು? ಅದು ನಿಜವಾದ ಪ್ರೀತಿಯಾಗಿದ್ದರೆ, ಹಿಂದೂಗಳನ್ನು ಇಸ್ಲಾಂಗೆ ಮತಾಂತರಗೊಳಿಸಲು ಏಕೆ ಒತ್ತಾಯಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ವಿಪರ್ಯಾಸವೆಂದರೆ- ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಈ ಸಂಬಂಧ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಆದರೂ, ಬಿಜೆಪಿ ಆಳ್ವಿಕೆಯ ಹಲವಾರು ರಾಜ್ಯಗಳಲ್ಲಿ “ಲವ್ ಜಿಹಾದ್” ವಿರುದ್ಧ ಕಠಿಣ ಕಾನೂನು ಶೀಘ್ರದಲ್ಲೇ  ತರಲಾಗುವುದು ಎಂದು ಘೋಷಿಸಡಲಾಗುತ್ತಿದೆ. ಇಂದು ಉತ್ತರ ಪ್ರದೇಶ ಸರ್ಕಾರ, ಮಂಗಳವಾರ ಹರಿಯಾಣ ಸರ್ಕಾರ, ಮಧ್ಯಪ್ರದೇಶ ಸರ್ಕಾರ ಇದೇ ರೀತಿಯ ಘೋಷಣೆ ಮಾಡಿವೆ.


ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...