Homeಮುಖಪುಟನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

ನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

- Advertisement -
- Advertisement -

ರೆಸ್ಟೊರೆಂಟ್‌ನ ಫ್ರಿಡ್ಜ್‌ನಲ್ಲಿ ದೆಹಲಿಯ ಯುವತಿಯ ಶವವನ್ನು ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿರುವುಗಳು ಲಭಿಸುತ್ತಿವೆ. ಕೊಲೆ ಕೃತ್ಯದಲ್ಲಿ ಆ ಯುವತಿಯ ಪ್ರಿಯಕನ ತಂದೆಯೂ ಭಾಗಿಯಾಗಿರುವ ವಿಚಾರ ಹೊರಬಿದ್ದಿದೆ. ದೆಹಲಿ ಪೊಲೀಸರು ಪ್ರಿಯಕರನ ತಂದೆಯನ್ನೂ ಬಂಧಿಸಿದ್ದಾರೆ.

23 ವರ್ಷದ ನಿಕ್ಕಿ ಯಾದವ್ ಅವರನ್ನು ಆಕೆಯ ಪಾರ್ಟನರ್‌‌ ಸಾಹಿಲ್ ಗೆಹ್ಲೋಟ್ ಕೊಲೆಗೈದಿದ್ದನು. ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ ಕೃತ್ಯ ಎಸಗಿದ್ದನು. ಕಳೆದ ವರ್ಷ ಭಾರೀ ಸುದ್ದಿಯಾದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಪ್ರಕರಣವನ್ನು ನಿಕ್ಕಿ- ಸಾಹಿಲ್ ಪ್ರಕರಣ ಮರುಕಳಿಸಿತ್ತು. ಸಾಹಿಲ್‌ ತನ್ನ ಕುಟುಂಬದ ಒಡೆತನದ ರೆಸ್ಟೋರೆಂಟ್‌ನಲ್ಲಿ ಶವವನ್ನು ಫ್ರಿಜ್‌ನಲ್ಲಿ ಇಟ್ಟಿದ್ದನು.

ದೇಶದಲ್ಲಿ ಅನೇಕರು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದಾಗ ಪೊಲೀಸರು ನಿಕ್ಕಿ ಯಾದವ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದರು.

“ದೆಹಲಿ ಪೊಲೀಸರು ಈವರೆಗೆ 5 ಜನರನ್ನು ಬಂಧಿಸಿದ್ದಾರೆ. ಪಿತೂರಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಗೆಹ್ಲೋಟ್ ಅವರ ತಂದೆಯನ್ನೂ ಬಂಧಿಸಲಾಗಿದೆ” ಎಂದು ವಿಶೇಷ ಸಿಪಿ ರವೀಂದರ್ ಯಾದವ್ ಅವರು ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸಾಹಿಲ್ ಮತ್ತು ನಿಕ್ಕಿಯವರು ಅಕ್ಟೋಬರ್ 2020ರಲ್ಲಿ ನೋಯ್ಡಾ ದೇವಸ್ಥಾನದಲ್ಲಿ ವಿವಾಹವಾಗಿದ್ದರು ಎಂಬ ಮತ್ತೊಂದು ವಿಚಾರವನ್ನು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಸಾಹಿಲ್‌ನ ಮನೆಯವರು ಈ ಸಂಬಂಧವನ್ನು ಒಪ್ಪಿಕೊಂಡಿರಲಿಲ್ಲ. ಬೇರೊಂದು ಹುಡುಗಿಯೊಂದಿಗೆ ಸಾಹಿಲ್‌ ಮದುವೆಯನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನ ಲಿವ್‌ ಇನ್‌ ಪಾರ್ಟನರ್‌ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ನಿಕ್ಕಿಗೆ ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಈ ವಿಷಯ ಆಕೆಗೆ ಗೊತ್ತಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ನೈಋತ್ಯ ದೆಹಲಿಯಲ್ಲಿನ ತನ್ನ ಬಾಡಿಗೆ ಮನೆಗೆ ನಿಕ್ಕಿ ಯಾದವ್ ಪ್ರವೇಶಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ವೇಳೆ ಕಂಡುಕೊಂಡಿದ್ದಾರೆ. ಫೆಬ್ರವರಿ 9ರಂದು ಸೆರೆಯಾಗಿರುವ ವೀಡಿಯೊದಲ್ಲಿ, ನಿಕ್ಕಿ ಒಂಟಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಆಕೆಯ ಗೆಳೆಯನು ಆ ದಿನ ಕೆಲವು ಗಂಟೆಗಳ ನಂತರದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ಈ ದಂಪತಿಗಳು ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ, ಮನೆಯಿಂದ ಸ್ವಲ್ಪ ದೂರದಲ್ಲಿ ಜಗಳವಾಡಿದ್ದರು.

ಜಗಳ ತಾರಕ್ಕೇರಿದಾಗ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಭಯಭೀತನಾಗಿದ್ದ ಆತ, ತನ್ನ ಗೆಳತಿಯ ಶವವನ್ನು ತಮ್ಮ ಕುಟುಂಬದ ಧಾಬಾದಲ್ಲಿನ ಫ್ರೀಜರ್‌ನಲ್ಲಿ ಇರಿಸಲು ನಿರ್ಧರಿಸಿದ್ದನು.

ತನ್ನ ಲಿವ್‌ ಇನ್ ಪಾರ್ಟನರ್‌ಅನ್ನು ಈ ರೀತಿಯಲ್ಲಿ ದೆಹಲಿಯಲ್ಲಿ ಕೊಂದಿರುವ ಎರಡನೇ ಪ್ರಮುಖ ಘಟನೆ ಇದಾಗಿದೆ. ಕಳೆದ ವರ್ಷ, ಶ್ರದ್ಧಾ ವಾಕರ್ ಅವರನ್ನು ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದನು. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ನಗರದಾದ್ಯಂತ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಮೊದಲು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...