Homeಮುಖಪುಟತೈಲ ಬೆಲೆ ಕಡಿಮೆ ಮಾಡಿ; ಭಗವಾನ್ ರಾಮನಿಗೂ ಖುಷಿಯಾಗುತ್ತದೆ: ಶಿವಸೇನೆ

ತೈಲ ಬೆಲೆ ಕಡಿಮೆ ಮಾಡಿ; ಭಗವಾನ್ ರಾಮನಿಗೂ ಖುಷಿಯಾಗುತ್ತದೆ: ಶಿವಸೇನೆ

- Advertisement -
- Advertisement -

“ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಬದಲಿಗೆ ತೈಲ ಬೆಲೆಯನ್ನು ತಗ್ಗಿಸಲು ಕ್ರಮ ಕೈಗೊಳ್ಳಿ” ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಆಗ್ರಹಿಸಿದೆ.

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಬದಲು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಗ್ಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂಧನ ಬೆಲೆ ಗಗನಕ್ಕೇರುತ್ತಿದ್ದರೂ ಬಾಲಿವುಡ್ ತಾರೆಗಳು ಮೌನ ವಹಿಸಿರುವುದು ಏಕೆ?” ಎಂದು ಶಿವಸೇನಾ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದೆ.

2014ರಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಬೆಲೆ ಏರಿಕೆಯಾದಾಗ ಅಕ್ಷಯ್ ಕುಮಾರ್ ಹಾಗೂ ಅಮಿತ್ ಬಚ್ಚನ್ ಮುಂತಾದ ಬಾಲಿವುಡ್ ತಾರೆಗಳು ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದರು. ಆದರೆ ಈಗ ಪೆಟ್ರೋಲ್ ಬೆಲೆ 100 ರೂ. (ರಾಜಸ್ಥಾನದಲ್ಲಿ) ದಾಟಿದರೂ ಬಾಲಿವುಡ್ ತಾರೆಗಳು ಮೌನ ಪಾಲಿಸುತ್ತಿದ್ದಾರೆ ಎಂದು ಶಿವಸೇನಾ ಆರೋಪಿಸಿದೆ.

“ಕೇಂದ್ರ ಸರ್ಕಾರದ ಸೂಚನೆಯಂತೆ ಸೆಲೆಬ್ರಿಟಿಗಳು ಮೌನ ಪಾಲಿಸುತ್ತಿದ್ದಾರೆ. ಇದರ ಅರ್ಥವೇನೆಂದರೆ 2014ಕ್ಕಿಂತ ಮೊದಲು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿತ್ತು. ಸರ್ಕಾರದ ನೀತಿಗಳನ್ನು ಟೀಕಿಸಿದರೆ ದೇಶ ದ್ರೋಹಿ ಎಂಬ ಆರೋಪ ಹೊರಿಸಿ ಜೈಲಿಗೆ ಕಳುಹಿಸುತ್ತಿರಲಿಲ್ಲ. ಆದರೆ ಇಂದು ನಾವು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರುದ್ಧ ಮಾತನಾಡುವ ಹಕ್ಕನ್ನು ಕಳೆದುಕೊಂಡಿದ್ದೇವೆ. ಹಾಗಾಗಿ ಅಕ್ಷಯ್, ಅಮಿತಾಬ್ ಅವರನ್ನು ಅನಗತ್ಯವಾಗಿ ದೂಷಿಸಬೇಕೇ?” ಎಂದಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ರೂಪಿಸಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ದೇವಾಲಯದ ನಿರ್ಮಾಣಕ್ಕಾಗಿ ಕಳೆದ ತಿಂಗಳು ದೇಣಿಗೆ ಸಂಗ್ರಹಿಸುವ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುವ ಬದಲು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿ. ದರ ಇಳಿಕೆಯಿಂದ ರಾಮ ಭಕ್ತರಿಗೆ ಆಹಾರ ಸಿಗಲಿದ್ದು, ಭಗವಾನ್ ಶ್ರೀರಾಮ್ ಕೂಡಾ ಖುಷಿಪಡಲಿದ್ದಾರೆ ಎಂದು ತಿಳಿಸಿದೆ.


ಇದನ್ನೂ ಓದಿ: ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...