HomeಮುಖಪುಟLPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

- Advertisement -
- Advertisement -

ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ 25 ರೂಪಾಯಿಯಂತೆ ಹೆಚ್ಚಳ ಮಾಡಲಾಗಿದೆ. ಅಡುಗೆ ಅನಿಲದ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಅನ್ಯಾಯದ ವಿರುದ್ಧ ದೇಶವು ಒಗ್ಗೂಡುತ್ತಿದೆ ಎಂದು ಹೇಳಿದ್ದಾರೆ.

ಆಗಸ್ಟ್‌ 1 ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಆಗಸ್ಟ್‌ 17ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25ರೂ ಏರಿಕೆ ಮಾಡಲಾಗಿತ್ತು. ಅದಾದ ನಂತರ ಮತ್ತೆ ಸೆಪ್ಟೆಂಬರ್‌ 1ರಿಂದ ಜಾರಿಗೆ ಬರುವಂತೆ ಮತ್ತೆ 25 ರೂ ಹೆಚ್ಚಿಸಲಾಗಿದೆ.

ಕಾಂಗ್ರೆಸ್ ಪಕ್ಷವು ಪೆಟ್ರೋಲ್, ಡೀಸೆಲ್ ಮತ್ತು LPG ಬೆಲೆಗಳ ಏರಿಕೆಯ ವಿರುದ್ದ ಒಕ್ಕೂಟ ಸರ್ಕಾರದ ದಾಳಿ ಮಾಡುತ್ತಿದೆ. ಸರ್ಕಾರ ವಿಧಿಸಿರುವ ಕೆಲವು ತೆರಿಗೆಗಳನ್ನು ತೆಗೆದುಹಾಕುವ ಮೂಲಕ ಅವುಗಳನ್ನು ಕಡಿಮೆ ಮಾಡುವಂತೆ ಪಕ್ಷವು ಒತ್ತಾಯಿಸುತ್ತಿದೆ.

ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

“ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಒತ್ತಾಯಿಸುವವನು, ತಾನು ಸ್ನೇಹಿತರ ನೆರಳಿನ ಅಡಿಯಲ್ಲಿ ಮಲಗುತ್ತಿದ್ದಾನೆ. ಆದರೆ ದೇಶವು ಅನ್ಯಾಯದ ವಿರುದ್ಧ ಒಂದಾಗುತ್ತಿದೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 20% ಕಡಿಮೆ ಬೆಲೆ ನೀಡಿ ಸೇಬು ಖರೀದಿಗೆ ಮುಂದಾದ ಅದಾನಿ ಕಂಪನಿ: ರೈತರಿಂದ ಅದಾನಿ ಬಾಯ್ಕಾಟ್ ಬೆದರಿಕೆ

ಅಷ್ಟೆ ಅಲ್ಲದೆ, ‘ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಹ್ಯಾಶ್ ಟ್ಯಾಗ್‌‌ನೊಂದಿಗೆ ಈ ವರ್ಷದ ಜನವರಿಯಿಂದ ದೇಶದ ನಾಲ್ಕು ಮಹಾನಗರಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯ ಹೆಚ್ಚಳದ ಚಾರ್ಟ್ ಅನ್ನು ರಾಹುಲ್ ಗಾಂಧಿ ತನ್ನ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂದಿನ ಬೆಲೆ ಏರಿಕೆಗೂ ಮೊದಲು, ಬೆಂಗಳೂರಿನಲ್ಲಿ 14.2 ಕೆ.ಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗೆ 862 ರೂ ನೀಡಲಾಗುತ್ತಿತ್ತು. ಇನ್ನು ಮುಂದೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 887ರೂ ಬೆಲೆ ತೆರಬೇಕಾಗಿದೆ. ಹದಿನೈದು ದಿನಗಳ ಅಂತದಲ್ಲಿ 50 ರೂ ಏರಿಕೆಯಾಗಿರುವುದು ಜನಸಾಮಾನ್ಯರ ಹೊರೆ ಹೆಚ್ಚಿಸಿದೆ. 2021ರ ಜನವರಿಯಿಂದ ಸೆಪ್ಟೆಂಬರ್‌ 1ರವರೆಗೆ ಅಡುಗೆ ಸಿಲಿಂಡರ್‌ ಬೆಲೆ ಒಟ್ಟು 190 ರೂ ಹೆಚ್ಚಳವಾಗಿದೆ.

ಕೇಂದ್ರ ಸರ್ಕಾರದ ಈ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದೆ.

ಸಿಲಿಂಡರ್‌, ಅಡುಗೆ ಎಣ್ಣೆ, ದಿನಸಿ, ಪೆಟ್ರೋಲ್‌, ವಿದ್ಯುತ್‌… ಹೀಗೆ ದಿನನಿತ್ಯದ ಬದುಕಿನ ಅಗತ್ಯಗಳ ಬೆಲೆ ಏರಿಕೆಯಿಂದಾಗಿ ಜನರು ಹೈರಾಣರಾಗಿದ್ದಾರೆ. ಒಂದು ಕಡೆ ಕೋವಿಡ್‌ನಿಂದಾಗಿ ಸರಿಯಾಗಿ ಸಂಬಳ, ದಿನಗೂಲಿ ಇಲ್ಲದೇ ಮನೆಯಲ್ಲಿ ಇದ್ದದ್ದರಲ್ಲೇ ಒಂದೊತ್ತಿನ ಹೊಟ್ಟೆ ತುಂಬಿಸಿಕೊಂಡಿದ್ದ ಜನರ ಬದುಕಲ್ಲಂತೂ ಈ ಬೆಲೆ ಏರಿಕೆ ಸಾವು ನೋವಿನ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ರಾಹುಲ್ ಅವರ ಪ್ರತಿಭಟನಾ ಶೈಲಿ ಅತ್ಯದ್ಭುತ ವಾಗಿದೆ
    ಪ್ರತಿ ದಿವಸ twitter ನಲ್ಲಿ ಅವರು ಪಡುತ್ತಿರುವ ಕಷ್ಟ ಮನ ಕಲಕುವಂತಿದೆ.
    ಪಾಪ, ರಾಹುಲ್ ಅವರಿಗೆ ಕೆಲವು ವರ್ಷಗಳ ವಿಶ್ರಾಂತಿ ಕೊಡುವುದರ ಬಗ್ಗೆ ಸೋನಿಯಾ ಅವರು ಗಂಭೀರವಾಗಿ ಯೋಚಿಸಬೇಕು.

    ????????

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...