Homeಅಂತರಾಷ್ಟ್ರೀಯಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

- Advertisement -
- Advertisement -

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ (ಎಲ್‌ಎಸ್‌ಇ) ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್‌.ಅಂಬೇಡ್ಕರ್‌ ಕುರಿತ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ ನಡೆಸಿದೆ.

ಎಲ್ಎಸ್ಇ ದಕ್ಷಿಣ ಏಷ್ಯಾ ಕೇಂದ್ರ ಎಲ್ಎಸ್ಇ ಲೈಬ್ರರಿ ಮತ್ತು ಡಿಕೊಲೊನೈಸಿಂಗ್ ಎಲ್ಎಸ್ಇ ಕಲೆಕ್ಟಿವ್ ಎಂಬ ಮೂರು ಕೇಂದ್ರಗಳು ಸೇರಿ ನಡೆಸಿವೆ. ಇದರಲ್ಲಿ ಮೊದಲು 1916 ರಲ್ಲಿ ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ದಾಖಲಾಗಿರುವ ಅರ್ಜಿಯನ್ನು ತೋರಿಸುವ ಮೂಲಕ ಆನ್ಲೈನ್ ಪ್ರದರ್ಶನವನ್ನು ಆರಂಭಿಸಲಾಗಿದೆ.

ಎಲ್ಎಸ್ಇಯೊಂದಿಗಿನ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಸಂಬಂಧ, ಸಂವಹನಗಳ ದಾಖಲೆ, ಅಂಬೇಡ್ಕರ್ ಅವರ ಜೀವನದಿಂದ ಪ್ರೇರಿತವಾದ ಎಲ್ಎಸ್ಇಯಲ್ಲಿ ಅವರ ಚಟುವಟಿಕೆಯನ್ನು ದಾಖಲಿಸಲು ಈ ಪ್ರದರ್ಶನ ಒಂದು ಉತ್ತಮ ಕಾರ್ಯ ಸ್ಥಳವಾಗಿದೆ ಎಂದು ಎಲ್ಎಸ್ಇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ವಸ್ತು ಪ್ರದರ್ಶನದ ಜೊತೆಗೆ ಅಂಬೇಡ್ಕರ್‌ ಕುರಿತ ಹಲವು ಕಾರ್ಯಕ್ರಮಗಳು, ಓದಿನ ಪಟ್ಟಿಗಳು, ಪಾಡ್‌ಕಾಸ್ಟ್‌ಗಳು ಮತ್ತು ಇತರ ವಿಷಯಗಳ ರೆಕಾರ್ಡಿಂಗ್‌ಗಳನ್ನು ಸೇರಿಸಲಾಗುತ್ತದೆ. ಜೊತೆಗೆ ಅಂಬೇಡ್ಕರ್ ಎಂದರೆ ನಮಗೆ ಏನು ಎಂಬುದರ ಕುರಿತು ಎಲ್ಎಸ್‌ಇ ಸಮುದಾಯದಿಂದ ವಿಚಾರಗಳನ್ನು ಪಡೆದು ಒಂದೆಡೆ ಸೇರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಅಂಬೇಡ್ಕರ್ ಅವರು ತಮ್ಮ 25 ವರ್ಷದಲ್ಲಿ 1916 ರಲ್ಲಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ದಾಖಲಾಗಿದ್ದರು. ಇದಕ್ಕಿಂತ ಮೊದಲೇ ಬಾಂಬೆ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದರು. ಮುಂಬೈ ಎಲ್ಫಿನ್‌ಸ್ಟೋನ್ (Elphinstone) ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡಿದ ಮೊದಲ ದಲಿತ ಸಮುದಾಯದ ವ್ಯಕ್ತಿ ಅಂಬೇಡ್ಕರ್.

A group photo of LSE students and staff

ತಮ್ಮ ಬಾಲ್ಯದುದ್ದಕ್ಕೂ “ಅಸ್ಪೃಶ್ಯ” ಎಂದು ತಾರತಮ್ಯವನ್ನು ಎದುರಿಸುತ್ತಿದ್ದ ಅವರು, ಬರೋಡಾ ರಾಜ್ಯದಿಂದ (ಈಗ ವಡೋದರಾ) ವಿದ್ಯಾರ್ಥಿವೇತನವನ್ನು ಪಡೆದರು. ಇದರಿಂದ ವಿದೇಶದಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮುಗಿಸಿ, ಡಾಕ್ಟರೇಟ್ ಪಡೆದು ಅಲ್ಲಿಂದ ಲಂಡನ್‌ಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳಿದ್ದರು.

ಈ ಆನ್ಲೈನ್ ವಸ್ತು ಪ್ರದರ್ಶನದಲ್ಲಿ ಅಂಬೇಡ್ಕರ್‌ ಅವರ ಕುರಿತ ಅಪರೂಪದ ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಲಂಡನ್‌ ಸ್ಕೂಲ್ ಆಫ್ ಎಕನಾಮಿಕ್ಸ್‌ ಮತ್ತು ಡಾ. ಬಿ.ಆರ್‌. ಅಂಬೇಡ್ಕರ್‌ ನಡುವಿನ ಅವಿನಾಭಾವ ಸಂಬಂಧವನ್ನು ಈ ಪ್ರದರ್ಶನ ತಿಳಿಸುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿಯೂ ಎಲ್‌ಎಸ್‌ಇ ಜೊತೆಗಿನ ನಂಟು ಕುರಿತು ಇದು ವಿವರಿಸುತ್ತದೆ.

A timeline showing the LSE connections with the Indian Subcontinent


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...