Homeಮುಖಪುಟಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಾ ವಿಷಯವಾಗಿದೆ.

ಹುಟ್ಟುಹಬ್ಬ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಬರುತ್ತಿದ್ದಾಗ ನಡೆದ ಈ ಘಟನೆಯ ಹಿಂದೆ ಸಂಚು ಅಡಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

ಉನೈಝ್ ಖಾನ್ ಎಂಬ ಬಾಲಕ ಕಾರಿನೊಳಗೆ ಇಟ್ಟಿದ್ದ ಪಿಸ್ತೂಲನ್ನು ಕೈಗೆತ್ತಿಕೊಂಡು, ಅದರಲ್ಲಿ ಆಟವಾಡಲು ಪ್ರಾರಂಭಿಸಿದಾಗ ಆಕಸ್ಮಿಕವಾಗಿ ಗುಂಡು ಹಾರಿದ್ದು. ಇದರಿಂದ ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗ್ತಿದೆ.

ಆದರೆ, ಆತನ ತಂದೆ ಆಕಸ್ಮಿಕ ಸಾವಿನ ವರದಿಯನ್ನು ತಳ್ಳಿ ಹಾಕಿದ್ದಾರೆ. ತನ್ನ ಮಗನನ್ನು ಆತನ ಸ್ನೇಹಿತರೇ ಮನೆಯಿಂದ ಹೊರಗೆ ಕರೆದೊಯ್ದು, ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹುಟ್ಟುಹಬ್ಬದ ಪಾರ್ಟಿಗೆ ಹೋಗೋಣ ಎಂದು ನೆಪವೊಡ್ಡಿ ಉನೈಝ್‌ನನ್ನು ಆತನ ಸ್ನೇಹಿತರು ಮನೆಯಿಂದ ಕರೆದೊಯ್ದಿದ್ದರು. ಇದು ಆಕಸ್ಮಿಕವಲ್ಲ ಸಾವಲ್ಲ, ಸಂಚು ರೂಪಿಸಿ ನಡೆಸಿದ ಕೃತ್ಯ ಎಂದು ಉನೈಝ್ ತಂದೆ ಆರೋಪ ಮಾಡಿದ್ದಾರೆ.

ಆರಂಭದಲ್ಲಿ ಉನೈಝ್ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ ಎಂದು ಕುಟುಂಬಸ್ಥರಿಗೆ ಹೇಳಲಾಗಿತ್ತು. ಅವರು ಗಾಬರಿಯಿಂದ ಆಸ್ಪತ್ರೆಗೆ ಧಾವಿಸಿದಾಗ ಬಾಲಕನ ಪ್ರಾಣಪಕ್ಷಿ ಹಾರಿ ಹೋಗಿತ್ತು. ನಂತರ, ಆತ ಗುಂಡೇಟಿಗೆ ಬಲಿಯಾಗಿರುವ ವಿಚಾರ ಪೋಷಕರಿಗೆ ಗೊತ್ತಾಗಿದೆ ಎಂದು ಕೆಲ ವರದಿಗಳು ಹೇಳಿವೆ.

ಪ್ರಕರಣದ ತನಿಖೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನೊಳಗೆ ಲೋಡ್ ಮಾಡಲಾದ ಪಿಸ್ತೂಲ್ ಹೇಗೆ ಬಂತು ಮತ್ತು ಅದು ಯಾರ ಹೆಸರಿನಲ್ಲಿ ಪರವಾನಗಿ ಹೊಂದಿದೆ ಎಂಬುದನ್ನು ಪತ್ತೆಹಚ್ಚಲಾಗಿದೆ. ನಿರ್ಲಕ್ಷ್ಯತನದಿಂದ ಶಸ್ತ್ರಾಸ್ತ್ರವನ್ನು ಅಸುರಕ್ಷಿತವಾಗಿ ಬಿಟ್ಟಿದ್ದಕ್ಕಾಗಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತ ಎಂದು ಕುಟುಂಬಕ್ಕೆ ತಪ್ಪು ಮಾಹಿತಿ ನೀಡಿದ ವ್ಯಕ್ತಿಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಉನೈಝ್‌ ಅನ್ನು ಮನೆಯಿಂದ ಕರೆದೊಯ್ದಿದ್ದ ಆತನ ಸ್ನೇಹಿತರನ್ನು ಮತ್ತು ಪಾರ್ಟಿ ನಡೆದ ಸ್ಥಳದಲ್ಲಿದ್ದ ಕೆಲವು ವ್ಯಕ್ತಿಗಳನ್ನು ಈಗಾಗಲೇ ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಪಿಸ್ತೂಲ್ ಪತ್ತೆಯಾದ ಕಾರಿನ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಶಸ್ತ್ರಾಸ್ತ್ರವನ್ನು ಸುರಕ್ಷಿತವಾಗಿ ಇಡದ ಕಾರಣಕ್ಕೆ ಇವರ ಮೇಲೆ ಗಂಭೀರ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಪಾರ್ಟಿ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಘಟನೆಯ ಸಮಯದಲ್ಲಿ ಅಲ್ಲಿ ಯಾರಿದ್ದರು ಎಂಬ ಪಟ್ಟಿಯನ್ನು ಸಿದ್ಧಪಡಿಸಿ ಬಂಧನ ಪ್ರಕ್ರಿಯೆ ಮುಂದುವರಿಸಿದ್ದಾರೆ ಎಂದು ವರದಿಗಳು ವಿವರಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...