Homeಮುಖಪುಟಲುಲು ಮಾಲ್‌ ವಿವಾದ: ಕೋಮು ಪ್ರಚೋದನೆ ಮಾಡುವವರ ಹೆಡೆಮುರಿ ಕಟ್ಟಲು ಆದಿತ್ಯನಾಥ್ ಸೂಚನೆ

ಲುಲು ಮಾಲ್‌ ವಿವಾದ: ಕೋಮು ಪ್ರಚೋದನೆ ಮಾಡುವವರ ಹೆಡೆಮುರಿ ಕಟ್ಟಲು ಆದಿತ್ಯನಾಥ್ ಸೂಚನೆ

- Advertisement -
- Advertisement -

ಹೊಸದಾಗಿ ತೆರೆಯಲಾದ ಲುಲು ಮಾಲ್‌ಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದವನ್ನು ಬಹಳ ಗಂಭೀರವಾಗಿ ಪರಿಗಣಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಕೆಲವರು ಅನಗತ್ಯ ಟೀಕೆಗಳನ್ನು ಮಾಡಿ ಜನರಿಗೆ ಅಡ್ಡಿಪಡಿಸಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಿರುವ ಅವರು ಇಂತಹ ಅನಾಹುತ ಸೃಷ್ಟಿಸಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವ್ಯಾಪಾರ ಚಟುವಟಿಕೆ ನಡೆಸುತ್ತಿರುವ ಲುಲು ಮಾಲ್ ರಾಜಕೀಯ ಕೇಂದ್ರವಾಗಿ ಮಾರ್ಪಟ್ಟಿದೆ. ಕೆಲವು ವ್ಯಕ್ತಿಗಳು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ ಮಾಲ್‌ಗೆ ಭೇಟಿ ನೀಡುವ ಜನರ ಸಂಚಾರಕ್ಕೆ ಅಡ್ಡಿಪಡಿಸಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿರುವುದಾಗಿ ವರದಿಯಾಗಿದೆ.

“ಲಕ್ನೋ ಆಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಅಂತಹ ಅಸ್ವಸ್ಥತೆಯನ್ನು ಸಹಿಸಲಾಗುವುದಿಲ್ಲ. ಮಾಲ್‌ನಲ್ಲಿ ಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದ್ದಾರೆ.

“ಪ್ರಾರ್ಥನೆ ಅಥವಾ ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಲು ಯಾರಿಗೂ ಅನುಮತಿ ನೀಡಬಾರದು. ಅಧಿಕಾರಿಗಳು ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು” ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿರಿ: ನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

ಲುಲು ಮಾಲ್‌ಗೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರ ಬಂಧನವನ್ನು ಪೊಲೀಸರು ಖಚಿತಪಡಿಸಿದ ಒಂದು ದಿನದ ನಂತರ ಯೋಗಿ ಆದಿತ್ಯನಾಥ್ ಹೇಳಿಕೆ ಹೊರಬಿದ್ದಿದೆ.

ಇಬ್ಬರ ಬಂಧನದ ಸ್ವಲ್ಪ ಸಮಯದ ನಂತರ, ಶಾಪಿಂಗ್ ಮಾಲ್‌ಗೆ ಪ್ರವೇಶಿಸಲು ಪ್ರಯತ್ನಿಸಿ ಗಲಾಟೆ ಮಾಡಿದ್ದಕ್ಕಾಗಿ ಬಲಪಂಥೀಯ ಗುಂಪಿನ ಕನಿಷ್ಠ 15 ಸದಸ್ಯರನ್ನು ಬಂಧಿಸಲಾಯಿತು. ಗಲಾಟೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿ ಅಂತಿಮವಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ.

“ಇಬ್ಬರು ಮಾಲ್‌ಗೆ ಪ್ರವೇಶಿಸಿ, ನೆಲದ ಮೇಲೆ ಕುಳಿತು ಧಾರ್ಮಿಕ ಪ್ರಾರ್ಥನೆ ಮಾಡಲು ಪ್ರಾರಂಭಿಸಿದರು. ಮಾಲ್‌ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ ನಂತರ ಅವರನ್ನು ಬಂಧಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಗೋಪಾಲ್ ಕೃಷ್ಣ ಚೌಧರಿ ತಿಳಿಸಿದ್ದಾರೆ.

ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆದ ನಂತರ ವಿವಾದ ಭುಗಿಲೆದ್ದಿದೆ. ನಮಾಜ್‌ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿವಾದದ ಬಳಿ ಹಿಂದುತ್ವ ಮೂಲಭೂತವಾದಿಗಳು ಮಾಲ್‌ನಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿದ್ದಾರೆ. ಆದರೆ ಪೊಲೀಸರು ಇದಕ್ಕೆ ಅನುಮತಿ ನೀಡಿಲ್ಲ.

ಸಂಚಾರಕ್ಕೆ ಅಡ್ಡಿಯಾಗುವ ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸುವಂತೆಯೂ ಯುಪಿ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರ್ಮಿಕ ಯಾತ್ರೆಗಳು ಮತ್ತು ಮೆರವಣಿಗೆಗಳಲ್ಲಿ ಶಸ್ತ್ರಾಸ್ತ್ರಗಳ ಪ್ರದರ್ಶನ ಇರದಂತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

“ರಸ್ತೆಗಳು ಜನರ ಪ್ರಯಾಣಕ್ಕೆ ಯೋಗ್ಯವಾಗಿಬೇಕು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ಸಂಚಾರಕ್ಕೆ ಅಡ್ಡಿಯಾಗಬಾರದು. ಈ ನಿಟ್ಟಿನಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶ್ರಾವಣ ಮಾಸದಲ್ಲಿ ಶಿವನ ದೇವಾಲಯಗಳಲ್ಲಿ ಜನಸಂದಣಿ ಇರುತ್ತದೆ, ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದಿದ್ದಾರೆ.

ಲುಲು ಮಾಲ್‌ ಉದ್ಘಾಟನೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌

ಜುಲೈ 10ರಂದು ರಾಜ್ಯದ ರಾಜಧಾನಿ ಲಕ್ನೋದಲ್ಲಿ ಲುಲು ಗ್ರೂಪ್ ಅಧ್ಯಕ್ಷ ಯೂಸುಫಲಿ ಎಂಎ ಅವರು ಆಯೋಜಿಸಿದ್ದ ಬೃಹತ್‌ ಸಮಾರಂಭದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರೂ ಪಾಲ್ಗೊಂಡು, ಲುಲು ಮಾಲ್ ಉದ್ಘಾಟಿಸಿದ್ದರು. ಮುಖ್ಯಮಂತ್ರಿಯವರ ಚಿತ್ರಗಳನ್ನು ಹೊಂದಿರುವ ಪೂರ್ಣ ಪುಟದ ಜಾಹೀರಾತನ್ನು ಲುಲು ಗ್ರೂಪ್‌ ರಾಜ್ಯದ ಎಲ್ಲ ಪ್ರಮುಖ ಪತ್ರಿಕೆಗಳಿಗೆ ನೀಡಿತ್ತು. ಉದ್ಘಾಟನಾ ಸಮಾರಂಭದಲ್ಲಿ ಯುಪಿ ಅಸೆಂಬ್ಲಿಯ ಸ್ಪೀಕರ್ ಸತೀಶ್ ಮಹಾನಾ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ. ದಿನೇಶ್ ಶರ್ಮಾ ಹಾಜರಿದ್ದರು.

ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಪ್ರಯಾಗರಾಜ್, ವಾರಣಾಸಿ, ಗೋರಖ್‌ಪುರ ಮತ್ತು ಕಾನ್ಪುರ ಸೇರಿದಂತೆ ರಾಜ್ಯದ ಇತರ ಪಟ್ಟಣಗಳಲ್ಲಿ ಲುಲು ಗ್ರೂಪ್‌ ಹೂಡಿಕೆ ಮಾಡಲು ಮುಂದಾಗಿರುವುದು ಸಂತಸ ತಂದಿದೆ”  ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...