Homeಕರ್ನಾಟಕಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

- Advertisement -
- Advertisement -

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಅಭ್ಯರ್ಥಿ, ವಸತಿ ಸಚಿವ ವಿ.ಸೋಮಣ್ಣನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಮಪತ್ರ ಅನರ್ಹಗೊಳ್ಳುವ ಭೀತಿಯಲ್ಲಿ ಸೋಮಣ್ಣ ಇದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಿನಗೆ ಗೂಟದ ಕಾರು ಕೊಡ್ತೀವಿ. ಮೊದಲು ನಾಮಪತ್ರ ವಾಪಸ್‌ ತಗೊ” ಎಂದು ಮಲ್ಲಿಕಾರ್ಜುನಸ್ವಾಮಿ ಅವರಿಗೆ ಸೋಮಣ್ಣ ಕರೆ ಮಾಡಿ ಹೇಳಿರುವ ಆಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸೋಮಣ್ಣನವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳುತ್ತಿವೆ.

ಭ್ರಷ್ಟ ಆಚರಣೆಗಳ ಕಾರಣಕ್ಕೆ ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್‌ 123 ಅಡಿ ಈ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಬಹುದು ಹಾಗೂ ಕಾಯ್ದೆಯ ಸೆಕ್ಷನ್‌ 8 (1) (ಎ) ಅಡಿಯಲ್ಲಿ ಅಭ್ಯರ್ಥಿಯನ್ನು ಚುನಾವಣೆಯಿಂದ ಅನರ್ಹಗೊಳಿಸಬಹುದು ಎಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಸೆಕ್ಷನ್‌ 171 ಇ (ಲಂಚ ಪಡೆದ ಆರೋಪ) ಅನ್ವಯ ಆರೋಪ ಸಾಬೀತಾದಲ್ಲಿ ಒಂದು ವರ್ಷದ ಸೆರೆವಾಸ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಇದೆ. ಸೆಕ್ಷನ್‌ 171 ಎಫ್‌ (ಚುನಾವಣೆಯಲ್ಲಿ ಆಮಿಷ ಒಡ್ಡಿದ ಆರೋಪ) ಅನ್ವಯ ಆರೋಪ ಸಾಬೀತಾದಲ್ಲಿ ಆರೋಪಿಗೆ ಒಂದು ವರ್ಷದ ಸೆರೆವಾಸ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಇದೆ.

ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರುಣಾದಲ್ಲಿ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ನಿಂದ ಸತತ ಮೂರು ಬಾರಿ ಆಯ್ಕೆಯಾಗಿರುವ ಪುಟ್ಟರಂಗ ಶೆಟ್ಟಿ ಅವರು ಈ ಸಲವೂ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಒಂದು ವೇಳೆ ತ್ವರಿತಗತಿಯಲ್ಲಿ ವಿಚಾರಣೆ ನಡೆದು ನ್ಯಾಯಾಲಯದ ತೀರ್ಪು ಹೊರಬಿದ್ದರೆ ಸೋಮಣ್ಣನವರ ನಾಮಪತ್ರ ಉಭಯ ಕ್ಷೇತ್ರಗಳಲ್ಲೂ ಅನರ್ಹಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ಪ್ರಕರಣ ಎರಡು ಕ್ಷೇತ್ರಗಳ ಮೇಲೂ ಪರಿಣಾಮ ಬೀರಲಿದೆ.

ಅಭ್ಯರ್ಥಿಗೆ ಆಮಿಷ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರವಾಣಿ ಕರೆ ಮಾಡಿದ್ದ ವಿ. ಸೋಮಣ್ಣ, ನಾಮಪತ್ರ ಹಿಂಪಡೆದರೆ 50 ಲಕ್ಷ ರೂ. ಹಣ ಹಾಗೂ ಗೂಟದ ಕಾರನ್ನು ನೀಡುವ ಆಮೀಷ ಒಡ್ಡಿದ್ದಾರೆ. ಸೋಮಣ್ಣ ಅವರಿಂದ ತಮಗೆ ಕರೆ ಬಂದಿದ್ದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಇದು ಐಪಿಸಿ ಸೆಕ್ಷನ್ ( 171ಸಿ, 171 F) ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸೋಮಣ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಪ್ರಯತ್ನಿಸಿದ್ದೆ, ಹೈಕಮಾಂಡ್‌ ಬೇರೆ ಯೋಜನೆ ಹೊಂದಿತ್ತು: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...