Homeಮುಖಪುಟಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

ಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

- Advertisement -
- Advertisement -

ಆರ್ಥಿಕ ಕುಸಿತದ ಮಧ್ಯೆ ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಉದ್ಯೋಗ ಕಡಿತದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ನಿರುದ್ಯೋಗ ಹೆಚ್ಚಳದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಐಟಿ ಕಂಪನಿಗಳು ನಷ್ಟ ಸರಿದೂಗಿಸಲು ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಿದ್ದಾರೆ. ಕೇಂದ್ರ ನೀತಿಗಳ ಕಾರಣದಿಂದಾಗ ಆರ್ಥಿಕ  ಕುಸಿತದಿಂತ ಹೀಗಾಗುತ್ತಿದ್ದು, ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

“ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ಆಡಳಿತವು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ಯೋಚಿಸಿಲ್ಲ, ಇದು ರಾಜ್ಯಕ್ಕೆ ಶಾಪವಾಗಿದೆ. ತಮಿಳುನಾಡಿನ ಐಟಿ ಸಂಸ್ಥೆಗಳು ಈಗಾಗಲೇ ತನ್ನ ಅನೇಕ ಉದ್ಯೋಗಿಗಳನ್ನು ವಜಾ ಮಾಡಲು ಕೆಲವು ನಕಲಿ ಕಾರಣಗಳನ್ನು ನೀಡುತ್ತಿವೆ. ಈ ನಡುವೆ ಬಿಜೆಪಿಯ ಕಳಪೆ ಆರ್ಥಿಕ ಯೋಜನೆಗಳಿಂದಾಗಿ ದೇಶದಲ್ಲಿ 40,000 ಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ದರವು 4.5% ಕ್ಕೆ ಕುಸಿದಿದೆ. ಇದು ಜನವರಿ-ಮಾರ್ಚ್ 2013 ರ ನಂತರದ ಅತ್ಯಂತ ಕನಿಷ್ಠ ಮಟ್ಟವಾಗಿದೆ. ಇದು ಸತತ ಐದನೇ ತ್ರೈಮಾಸಿಕ ಕುಸಿತವನ್ನು ಸೂಚಿಸುತ್ತದೆ. ಈ ಬೆಳವಣಿಗೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸ್ಟಾಲಿನ್‌  “ಜಿಡಿಪಿ 4.5% ಕ್ಕೆ ಕುಸಿದಿದ್ದು ಕಳೆದ ಆರು ವರ್ಷಗಳಲ್ಲಿ ಕಡಿಮೆ ಆರ್ಥಿಕ ಬೆಳವಣಿಗೆಯ ದರವಾಗಿದೆ. ಇದು ಕೇವಲ ಆರ್ಥಿಕ ಬೆಳವಣಿಗೆ ನಿಧಾನಗತಿಯಲ್ಲ, ಇದು ದೊಡ್ಡ ಆರ್ಥಿಕ ಬಿಕ್ಕಟ್ಟಾಗಿದೆ. ಸರ್ಕಾರವು ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕು ಮತ್ತು ಅಸಲಿ ಆರ್ಥಿಕ ಕಾರ್ಯತಂತ್ರವನ್ನು ತಿಳಿಸಲು ಪ್ರಾರಂಭಿಸಬೇಕು” ಎಂದಿದ್ದಾರೆ.

ಇದಲ್ಲದೆ, ನಿರುದ್ಯೋಗವನ್ನು ತಡೆಗಟ್ಟುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಆಸಕ್ತಿ ತೋರಿಸದಿರುವುದನ್ನು ಅವರು ಖಂಡಿಸಿದ್ದಾರೆ. “ಈ ದೇಶದ ಭವಿಷ್ಯವೆಂದು ಪರಿಗಣಿಸಲ್ಪಟ್ಟಿರುವ ಯುವಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಆಟವನ್ನು ಆಡುತ್ತಿವೆ. ಆದ್ದರಿಂದ, ನಿರುದ್ಯೋಗ ಮತ್ತು ಐಟಿ ಉದ್ಯೋಗಿಗಳನ್ನು ದೊಡ್ಡ ಮಟ್ಟದಲ್ಲಿ ವಜಾ ಮಾಡುವ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಾಜ್ಯದ ಎಐಎಡಿಎಂಕೆ ಮತ್ತು ಕೇಂದ್ರದ ಬಿಜೆಪಿಯನ್ನು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...