Homeಮುಖಪುಟಕ್ಷೇತ್ರ ಪುನರ್‌ವಿಂಗಡನೆ: ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿರುವ ಎಂ.ಕೆ ಸ್ಟಾಲಿನ್

ಕ್ಷೇತ್ರ ಪುನರ್‌ವಿಂಗಡನೆ: ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿರುವ ಎಂ.ಕೆ ಸ್ಟಾಲಿನ್

- Advertisement -
- Advertisement -

ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದಂತೆ ರಚಿಸಲಾದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮೊದಲ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ವಿವರಿಸಲು ಪ್ರಧಾನಿ ನರೇಂದ್ರ ಮೋದಿ ಬಳಿಗೆ ವಿವಿಧ ಪಕ್ಷಗಳ ಸಂಸದರ ನಿಯೋಗ ಕೊಂಡೊಯ್ಯಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮುಂದಾಗಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿರುವ ಸ್ಟಾಲಿನ್, ಮಾರ್ಚ್ 22ರಂದು ನಡೆದ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು ರಾಜಕೀಯ ಗಡಿಗಳನ್ನು ಮೀರಿ ಸಂಸದೀಯ ಪ್ರಜಾಪ್ರಭುತ್ವದಲ್ಲಿ ನ್ಯಾಯಯುತ ಪ್ರಾತಿನಿಧ್ಯವನ್ನು ಬಯಸುವ ವಿವಿಧ ಪ್ರದೇಶಗಳ ನಾಗರಿಕರ ಬೇಡಿಕೆಗಳನ್ನು ಸಾಕಾರಗೊಳಿಸುತ್ತವೆ ಎಂದು ಹೇಳಿದ್ದಾರೆ.

“ಈ ವಿಷಯವು (ಕ್ಷೇತ್ರ ಪುನರ್‌ವಿಂಗಡನೆ) ನಮ್ಮ ರಾಜ್ಯಗಳು ಮತ್ತು ನಾಗರಿಕರಿಗೆ ಅತ್ಯಂತ ಮಹತ್ವದ್ದಾಗಿರುವುದರಿಂದ, ಜಂಟಿ ಕ್ರಿಯಾ ಸಮಿತಿಯ ಪರವಾಗಿ ಜ್ಞಾಪಕ ಪತ್ರವನ್ನು ಔಪಚಾರಿಕವಾಗಿ ಸಲ್ಲಿಸಲು ನಿಮ್ಮೊಂದಿಗೆ ಸಭೆ ನಡೆಸಲು ಸಮಯ ನೀಡುವಂತೆ ವಿನಂತಿಸುತ್ತೇನೆ” ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.

ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದಂತೆ ರಚಿಸಿರುವ ಜಂಟಿ ಕ್ರಿಯಾ ಸಮಿತಿಯ ಮೊದಲ ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಸಭೆಯಲ್ಲಿ ಕ್ಷೇತ್ರ ಪುನರ್‌ವಿಂಗಡನೆಯನ್ನು ಮುಂದಿನ 25 ವರ್ಷಗಳ ಅವಧಿಗೆ ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಒಕ್ಕೊರೊಳಿನಿಂದ ಒತ್ತಾಯಿಸಲಾಗಿದೆ.

ಪ್ರಜಾಪ್ರಭುತ್ವದ ವಿಷಯ ಮತ್ತು ಸ್ವರೂಪವನ್ನು ಸುಧಾರಿಸುವ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು ಮತ್ತು ರಾಜಕೀಯ ಪಕ್ಷಗಳು, ರಾಜ್ಯ ಸರ್ಕಾರಗಳು ಮತ್ತು ಇತರ ಪಕ್ಷಕಾರರಿಗೆ ಚರ್ಚಿಸಲು ಮತ್ತು ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಗಿದೆ.

ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದ 42, 84 ಮತ್ತು 87 ನೇ ಸಾಂವಿಧಾನಿಕ ತಿದ್ದುಪಡಿಗಳನ್ನು ಜಾರಿಗೆ ತರಲಾಗಿದೆ. ರಾಷ್ಟ್ರೀಯ ಜನಸಂಖ್ಯಾ ಸ್ಥಿರೀಕರಣದ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಹಾಗಾಗಿ, 1971ರ ಜನಗಣತಿಯ ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳ ಮೇಲಿನ ಪುನರ್‌ವಿಂಗಡನೆಯನ್ನು 25 ವರ್ಷಗಳವರೆಗೆ ವಿಸ್ತರಿಸಬೇಕು” ಸಭೆಯಲ್ಲಿ ಒತ್ತಾಯಿಸಲಾಗಿದೆ.

ತಮಿಳುನಾಡು| ಕಚ್ಚತೀವು ಮರಳಿ ಪಡೆಯುವ ನಿರ್ಣಯ ಮಂಡಿಸಲು ಮುಂದಾದ ಎಂ.ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...